ಹೊಳೆಗೆ ತೋಟೆ ಹಾಕಿ ಮೀನುಗಳ ಮಾರಣಹೋಮ: ಮೂವರು ವಶಕ್ಕೆ
ದಕ್ಷಿಣ ಕನ್ನಡ: ಗುಂಡ್ಯ ಹೊಳೆಯಲ್ಲಿ ನೂರಾರು ಮೀನುಗಳು ಸತ್ತುಬಿದ್ದ ಘಟನೆ ಬೆಳಕಿಗೆ ಬಂದಿದ್ದು, ಈ ಘಟನೆಯ ಬೆನ್ನ ಹಿಂದೆ ಬಿದ್ದ ಉಪ್ಪಿನಂಗಡಿ ಪೊಲೀಸರು ಆಂಧ್ರದ ಮೂವರನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಉದನೆ ತೂಗು ಸೇತುವೆ ಸಮೀಪ ಗುಂಡ್ಯ ಹೊಳೆಯಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿತ್ತು. ನೀರಿಗೆ ತೋಟೆ ಹಾಕಿರುವುದರಿಂದ ಮೀನುಗಳು ಸತ್ತಿದೆ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ವಿಚಾರವಾಗಿ ಕಾರ್ಯಾಚರಣೆ ನಡೆಸಿದ ನೆಲ್ಯಾಡಿ ಹೊರ ಠಾಣೆ ಪೊಲೀಸರು ಉದನೆಯ ಕಳಪಾರು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿಯ ಕೆಲಸಕ್ಕೆ ಬಂದಿದ್ದ ಆಂಧ್ರ ಮೂಲದ ಮೂವರನ್ನು ವಶಕ್ಕೆ ಪಡೆದುಕೊಂಡಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಪ್ರಾಣ ತೆಗೆದ ಕಣ್ಣಮುಚ್ಚಾಲೆ ಆಟ: ಬಾಲಕಿಯರಿಬ್ಬರ ದಾರುಣ ಸಾವು
ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾದ ಮತ್ತೋರ್ವ ಗುತ್ತಿಗೆದಾರ!
ಒಟಿಟಿಯಲ್ಲಿ ಕೆಜಿಎಫ್ ಚಾಪ್ಟರ್ 2 ಸದ್ಯದಲ್ಲೇ ಬಿಡುಗಡೆ: ದಿನಾಂಕ ಪ್ರಕಟ
ವೈಲೆಂಟ್ ಆಗಿದ್ದ ಅಜಯ್ ದೇವಗನ್ ರನ್ನು ಸೈಲೆಂಟ್ ಮಾಡಿದ ಕಿಚ್ಚ ಸುದೀಪ್!