ಹೋಳಿ ಹುಣ್ಣಿಮೆಯ ದಿನ ಉಡುಪಿ ಜಿಲ್ಲೆಯಲ್ಲಿ ವಿಶೇಷ ಸ್ಥಳೀಯ ರಜೆ
ಉಡುಪಿ ಜಿಲ್ಲೆಯಲ್ಲಿರುವ ಮರಾಠಿ ಸಮುದಾಯವು ಸಾಂಪ್ರದಾಯಿಕವಾಗಿ ಆಚರಿಸುವ ಹೋಳಿ ಹುಣ್ಣಿಮೆಯ ದಿನ ಮಾ.7ರಂದು ಉಡುಪಿ ಜಿಲ್ಲೆಯಲ್ಲಿ ವಿಶೇಷ ಸ್ಥಳೀಯ ರಜೆ ಘೋಷಿಸಿ ಉಡುಪಿ ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ
ಹೋಳಿ ಹಬ್ಬವನ್ನು ಮಾರ್ಚ್ ತಿಂಗಳಲ್ಲಿ ಬರುವ ಹೋಳಿ ಹುಣ್ಣಿಮೆಯ ದಿನ ಆಚರಿಸುತ್ತಾರೆ. ಈ ಬಗ್ಗೆ ವಿಶೇಷ ಸ್ಥಳೀಯ ರಜೆಯನ್ನು ಘೋಷಿಸುವ ಬಗ್ಗೆ ಉಡುಪಿ ಜಿಲ್ಲಾ ಮರಾಠಿ ಸಮಾಜ ಸೇವಾ ಸಂಘ ಉಡುಪಿ ಇವರ ಮನವಿಯಂತೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಉಡುಪಿ ಜಿಲ್ಲಾಧಿಕಾರಿಯವರಿಗೆ ಹೋಳಿ ಹುಣ್ಣಿಮೆ ಹಬ್ಬದ ದಿನ ಸ್ಥಳೀಯವಾಗಿ ವಿಶೇಷ ರಜೆ ಘೋಷಿಸುವ ಬಗ್ಗೆ ಪತ್ರ ಮುಖೇನ ಮನವಿ ಮಾಡಿದ್ದರು.
ಅದರಂತೆ ಜಿಲ್ಲಾಧಿಕಾರಿಯವರು ವಿದ್ಯಾಂಗ ಉಪ ನಿರ್ದೇಶಕರಿಗೆ ಈ ಕುರಿತು ಸಲ್ಲಿಸಿರುವ ವರದಿಯಂತೆ ಹೋಳಿ ಹುಣ್ಣಿಮೆ ಹಬ್ಬವನ್ನು ವಿಶೇಷವಾಗಿ ಆಚರಿಸುವ ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಒಂದು ದಿನದ ವಿಶೇಷ ಸ್ಥಳೀಯ ರಜೆಯನ್ನು ನೀಡುವಂತೆ ಆದೇಶ ಹೊರಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw