ಹೋಳಿ ಹಬ್ಬದ ನಂತರ ಹಿಜಾಬ್ ಭವಿಷ್ಯ: ಸುಪ್ರೀಂ ಕೋರ್ಟ್ - Mahanayaka
4:05 AM Tuesday 12 - November 2024

ಹೋಳಿ ಹಬ್ಬದ ನಂತರ ಹಿಜಾಬ್ ಭವಿಷ್ಯ: ಸುಪ್ರೀಂ ಕೋರ್ಟ್

hijab
16/03/2022

ನವದೆಹಲಿ: ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ ಸಲ್ಲಿಸಿದ ಅರ್ಜಿಗಳ ತುರ್ತು ವಿಚಾರಣೆ ಸಾಧ್ಯವಿಲ್ಲ, ಹೋಳಿ ರಜೆ ಬಳಿಕ ವಿಚಾರಣೆ ನಡೆಸಲಾಗುವುದು ಎಂದು ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ.

ಇಂದು ಕಲಾಪ ಆರಂಭಕ್ಕೂ ಮುನ್ನ ಹಿರಿಯ ವಕೀಲ ಸಂಜಯ್ ಹೆಗಡೆ ಹಿಜಬ್ ವಿವಾದ ಮೇಲ್ಮನವಿ ಅರ್ಜಿಗಳ ಸಲ್ಲಿಕೆಯ ಬಗ್ಗೆ ಪ್ರಸ್ತಾಪಿಸಿದರು. ಪರೀಕ್ಷೆಗಳು ಹತ್ತಿರವಾಗುತ್ತಿವೆ, ವಿದ್ಯಾರ್ಥಿನಿಯರು ತರಗತಿಗಳಿಗೆ ಹಾಜರಾಗಬೇಕಿದೆ ಹೀಗಾಗಿ ತುರ್ತು ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು.

ಇದಕ್ಕೆ ಮುಖ್ಯ ನ್ಯಾ.ಎನ್.ವಿ ರಮಣ ಪ್ರತಿಕ್ರಿಯಿಸಿ, ತುರ್ತು ವಿಚಾರಣೆ ಸಾಧ್ಯವಿಲ್ಲ. ಸೂಕ್ತ ಸಮಯದಲ್ಲಿ ನಾವು ವಿಚಾರಣೆ ನಡೆಸಲಿದ್ದೇವೆ. ಹೋಳಿ ರಜೆಯ ಬಳಿಕ ವಿಚಾರಣೆಗೆ ವಿಷಯ ಪಟ್ಟಿ ಮಾಡಲಾಗುವುದು ಎಂದು ಹೇಳಿದರು.

ಈ ವೇಳೆ ವಕೀಲ ಸಂಜಯ್ ಹೆಗಡೆ ಮಧ್ಯ ಪ್ರವೇಶ ಮಾಡಿ, ಸೋಮವಾರ ವಿಚಾರಣೆ ನಡೆಸುವಂತೆ ಮನವಿ ಮಾಡಿದರು. ಆದರೆ ಅದಕ್ಕೂ ನ್ಯಾಯಪೀಠ ಸಮ್ಮತಿ ಸೂಚಿಸಲಿಲ್ಲ.




ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IrdQk252EnnGsLx9CS8tli

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬೇಸಿಗೆಯಲ್ಲಿ ಕಬ್ಬಿನ ಹಾಲು ಸೇವಿಸಿ, ಈ ಎಲ್ಲ ಆರೋಗ್ಯ ಪ್ರಯೋಜನ ಪಡೆಯಿರಿ

ಫೇಸ್ ಬುಕ್, ಟ್ವಿಟ್ಟರ್ ಸಾಮಾಜಿಕ ಜಾಲತಾಣಗಳ ಬಗ್ಗೆ ಸೋನಿಯಾ ಗಾಂಧಿ ಗಂಭೀರ ಆರೋಪ

ಹಿಜಾಬ್ ಧರಿಸಿ ಬಂದಿದ್ದ ವಿದ್ಯಾರ್ಥಿನಿಯರಿಗೆ ಕಾಲೇಜು ಪ್ರವೇಶ ನಿರಾಕರಣೆ

ಮುಧೋಳ ಫೈಲ್ಸ್ !: ಜೋಡಿ ಕೊಲೆ ಪ್ರಕರಣ ಮಾಸುವ ಮೊದಲೇ ದಲಿತ ಯುವಕನ ಮೇಲೆ ಮಾರಣಾಂತಿ ಹಲ್ಲೆ!

ಚಿನ್ನ ಖರೀದಿಗೆ ಮುಗಿಬಿದ್ದ ಜನ: ಮತ್ತಷ್ಟು ಇಳಿಕೆಯಾಯ್ತು ಗೋಲ್ಡ್,  ಸಿಲ್ವರ್  ರೇಟ್

ಇತ್ತೀಚಿನ ಸುದ್ದಿ