ಭಾರೀ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ - Mahanayaka
1:30 PM Thursday 12 - September 2024

ಭಾರೀ ಮಳೆ : ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಜು.16ರಂದು ರಜೆ ಘೋಷಣೆ

rain
15/07/2024

ದಕ್ಷಿಣ ಕನ್ನಡ:  ಕರಾವಳಿ ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜುಲೈ 16ರಂದು  ಶಾಲಾ-ಕಾಲೇಜುಗಳಿಗೆ  ಜಿಲ್ಲಾಧಿಕಾರಿ ಮುಲ್ಲೈಮುಗಿಲನ್ ರಜೆ ಘೋಷಿಸಿದ್ದಾರೆ.

ಅಂಗನವಾಡಿ, ಪ್ರಾಥಮಿಕ, ಪ್ರೌಢ ಹಾಗೂ ಪಿಯು ಕಾಲೇಜು ವಿದ್ಯಾರ್ಥಿಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿ ಮಳೆಯಾಗುತ್ತಿದ್ದು, ಭಾರೀ ಗಾಳಿ ಸಹಿತ ಭರ್ಜರಿ ಮಳೆಯಾಗುತ್ತಿದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮವಹಿಸಿದೆ.


Provided by

ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ