ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ಡಿಸೆಂಬರ್ 11 ಶಾಲಾ ಕಾಲೇಜುಗಳಿಗೆ ರಜೆ
10/12/2024
ಬೆಂಗಳೂರು: ಮಾಜಿ ಸಿಎಂ ಎಸ್.ಎಂ.ಕೃಷ್ಣ ನಿಧನದ ಹಿನ್ನೆಲೆ ಕರ್ನಾಟಕ ಸರ್ಕಾರವು ಇಂದಿನಿಂದ ಮೂರು ದಿನಗಳ ಕಾಲ ರಾಜ್ಯದಲ್ಲಿ ಶೋಕಾಚರಣೆ ಘೋಷಿಸಿದೆ. ಇದೇ ವೇಳೆ ಡಿಸೆಂಬರ್ 11ರಂದು ರಾಜ್ಯಾದ್ಯಂತ ಸರ್ಕಾರಿ ರಜೆ ಘೋಷಿಸಿದೆ.
ಸರ್ಕಾರಿ ರಜೆ ಹಿನ್ನೆಲೆ ಸರ್ಕಾರಿ ಮತ್ತು ಖಾಸಗಿ ಶಾಲಾ—ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಡಿಸೆಂಬರ್ 10ರಿಂದ ಡಿಸೆಂಬರ್ 12ರವರೆಗೆ ಶೋಕಾಚರಣೆ ಘೋಷಿಸಲಾಗಿದೆ.
ಮೂರು ದಿನಗಳ ಕಾಲ ರಾಜ್ಯ ಸರ್ಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜ ಅರ್ಧಕ್ಕೆ ಹಾರಿಸಿ ಎಸ್.ಎಂ.ಕೃಷ್ಣ ಅವರಿಗೆ ಶ್ರದ್ಧಾಂಜಲಿ ಅರ್ಪಿಸಲಾಗುವುದು ಎಂದು ರಾಜ್ಯ ಸರ್ಕಾರ ತಿಳಿಸಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97