ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯಗೆ ಸಿಡಿ ಭೀತಿ!
ಬೆಂಗಳೂರು: ಹೊನ್ನಾಳಿ ವಿಧಾನಸಭಾ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರಿಗೆ ಸಿಡಿ ಭಯ ಆರಂಭವಾಗಿದ್ದು, ತನ್ನ ವಿರುದ್ಧ ಯಾವುದೇ ಮಾನ ಹಾನಿಕರ ಸುದ್ದಿಗಳು, ಚಿತ್ರಗಳು ಅಥವಾ ವಿಡಿಯೋ ತುಣುಕುಗಳನ್ನು ಮಾಧ್ಯಮಗಳಲ್ಲಿ ಪ್ರಸಾರ ಮಾಡದಂತೆ ಕೋರ್ಟ್ ಮೊರೆ ಹೋಗಿದ್ದಾರೆ ಎಂದು ವರದಿಯಾಗಿದೆ.
ನಗರದ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಾಧ್ಯಮಗಳಿಗೆ ತಡೆಯಾಜ್ಞೆ ನೀಡಿದ್ದು, ಅವಹೇಳನಕಾರಿಯಂತಹ ಸುಳ್ಳು ಸುದ್ದಿಗಳನ್ನು ಪ್ರಸಾರ ಮಾಡದಂತೆ ಮಾಧ್ಯಮಗಳಿಗೆ ನಿರ್ಬಂಧ ವಿಧಿಸುವಂತೆ ರೇಣುಕಾಚಾರ್ಯ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದು, ಈ ಅರ್ಜಿಯನ್ನು ವಿಚಾರಣೆ ನಡೆಸಿರುವ 20ನೇ ಹೆಚ್ಚುವರಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಅರ್ಜಿದಾರರಿಗೆ ಅಪಮಾನವಾಗುವಂತಹ ಸುದ್ದಿಗಳನ್ನು ಪ್ರಸಾರ ಮಾಡದಂತೆ ನಿರ್ಬಂಧ ಆಜ್ಞೆ ನೀಡಿ ಆದೇಶಿಸಿದೆ.
ಅರ್ಜಿದಾರರು ಹಲವು ವರ್ಷಗಳಿಂದಲೂ ಸಾರ್ವಜನಿಕ ಸೇವೆ ಸಲ್ಲಿಸಿದ್ದು, ವಿಧಾನಸಭಾ ಕ್ಷೇತ್ರವೊಂದರ ಜನಪ್ರತಿನಿಧಿಯಾಗಿದ್ದಾರೆ. ಹೀಗಾಗಿ ಆಧಾರ ರಹಿತವಾದ ಸುದ್ದಿಗಳನ್ನು ಪ್ರಸಾರ ಮಾಡಬಾರು ಎಂದು ಕೋರ್ಟ್ ಆದೇಶದಲ್ಲಿ ತಿಳಿಸಿದೆ.
ಇನ್ನಷ್ಟು ಸುದ್ದಿಗಳು…
ಬಿಜೆಪಿಗೆ ಬಂದ 17 ಶಾಸಕರಿಗೆ ಬಿಗ್ ಶಾಕ್ ನೀಡಿದ ಮಾಜಿ ಸಿಎಂ ಯಡಿಯೂರಪ್ಪ!
ವಿಚ್ಛೇದನದ ಬಳಿಕ ಜೊತೆಯಾಗಿ ಒಂದೇ ಮನೆಯಲ್ಲಿ ವಾಸಿಸುತ್ತಿದ್ದ ಸಹೋದರಿಯರ ಬರ್ಬರ ಹತ್ಯೆ!
ಕರ್ನಾಟಕ ಸರ್ಕಾರದ ವಿರುದ್ಧ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಉಪವಾಸ ಸತ್ಯಾಗ್ರಹ!
ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ ನಟಿ ಶಿಲ್ಪಾಶೆಟ್ಟಿ!
ನದಿ ಬಿದ್ದ ಬಾಲಕಿಯನ್ನು ರಕ್ಷಿಸಲು ಹೋದ ಅತ್ತೆಯೂ ನೀರುಪಾಲು | ನೀರು ಕುಡಿಯಲು ಹೋದ ವೇಳೆ ನಡೆದದ್ದೇನು?