ಒಎಸ್ ಆರ್ ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ: 10 ಜನರ ದಾರುಣ ಸಾವು
ಒಎಸ್ ಆರ್ ಟಿಸಿ ಬಸ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ10 ಜನ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಒಡಿಶಾದ ಗಂಜಾಂನಲ್ಲಿ ಭಾನುವಾರ ತಡರಾತ್ರಿ ನಡೆದಿದೆ.
ಗಂಜಾಂ ಜಿಲ್ಲೆಯ ದಿಗ್ಪಹಂಡಿಯ ಡೆಂಗೋಸ್ಟಾ ಪ್ರದೇಶದಲ್ಲಿ ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಹಲವರುಗಾಯಗೊಂಡಿದ್ದು, ಅವರನ್ನು ಸ್ಥಳೀಯ ಬ್ರಹ್ಮಪುರದ ಎಂಕೆಸಿಜೆ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ರಾಯಗಢ ಜಿಲ್ಲೆಯ ಗುಡಾರಿ ಪ್ರದೇಶದಿಂದ ಭುವನೇಶ್ವರಕ್ಕೆ ತೆರಳುತ್ತಿದ್ದ ಒಡಿಶಾ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (OSRTC) ಬಸ್ ಹಾಗೂ ಬೆರ್ಹಾಮ್ ಪುರ ಪ್ರದೇಶದ ಖಂಡೇಲಿ ಗ್ರಾಮದಲ್ಲಿ ಮದುವೆ ಸಮಾರಂಭ ಮುಗಿಸಿ ಹಿಂದಿರುಗುತ್ತಿದ್ದಾಗ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ.
ಅಪಘಾತದಲ್ಲಿ ಮೃತಪಟ್ಟವರೆಲ್ಲ ಖಾಸಗಿ ಬಸ್ ಪ್ರಯಾಣಿಕರಾಗಿದ್ದು, ಘಟನಾ ಸ್ಥಳಕ್ಕೆ ದೌಡಾಯಿಸಿರುವ ಪೊಲೀಸರು ಪರಿಶೀಲನೆ ನಡೆಸಿದ್ದು, ತನಿಖೆ ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/D73015iu7jn2glm2MECosd
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw