ಜಿಲ್ಲಾಧಿಕಾರಿಯ ಹಾಡಿಗೆ ಕುಣಿದು ಕುಪ್ಪಳಿಸಿದ ನೌಕರರು: ವಿಡಿಯೋ ವೈರಲ್
27/12/2022
ಚಿಕ್ಕಮಗಳೂರು: ಹೊಸ ಬೆಳಕು ಮೂಡುತಿದೆ ಎಂದು ವೇದಿಕೆ ಮೇಲೆ ಚಿಕ್ಕಮಗಳೂರು ಜಿಲ್ಲಾಧಿಕಾರಿ ರಮೇಶ್ ಹಾಡಿದ್ದು, ಈ ಹಾಡಿಗೆ ಸರ್ಕಾರಿ ನೌಕರರು ಕುಣಿದು ಕುಪ್ಪಳಿಸಿದ್ದಾರೆ.
ತರೀಕೆರೆಯಲ್ಲಿ ನಡೆದ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ಕೆಲಸದ ಒತ್ತಡದ ಮಧ್ಯೆಯೂ ತಹಶೀಲ್ದಾರ್ ಗಳು ಸೇರಿದಂತೆ ಎಲ್ಲಾ ಅಧಿಕಾರಿಗಳು ಡ್ಯಾನ್ಸ್ ಮಾಡಿ ಎಂಜಾಯ್ ಮಾಡಿದರು.
ಜಿಲ್ಲಾಧಿಕಾರಿಗಳು ವೇದಿಕೆಯಲ್ಲಿ ಹಾಡು ಹಾಡುತ್ತಿದ್ದಂತೆಯೇ ವೇದಿಕೆ ಹತ್ತಿದ ನೌಕರರು ಕುಣಿದು ಕುಪ್ಪಳಿಸಿದರು. ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka