ಬೌದ್ಧ ಮತ್ತು ಜೈನ ಧರ್ಮಗಳ ಪರಿಚಯ ಪಾಠ ಕೈಬಿಟ್ಟಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ - Mahanayaka

ಬೌದ್ಧ ಮತ್ತು ಜೈನ ಧರ್ಮಗಳ ಪರಿಚಯ ಪಾಠ ಕೈಬಿಟ್ಟಿಲ್ಲ: ಸುರೇಶ್ ಕುಮಾರ್ ಸ್ಪಷ್ಟನೆ

20/02/2021

ಬೆಂಗಳೂರು:  ಆರನೇ ತರಗತಿಯ ಸಮಾಜ ವಿಜ್ಞಾನ ಪಠ್ಯದಿಂದ ಬೌದ್ಧ ಮತ್ತು ಜೈನ ಧರ್ಮಗಳ ಪರಿಚಯ ಪಾಠಗಳನ್ನು ಕೈಬಿಟ್ಟಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದು, ತಪ್ಪು ಗ್ರಹಿಕೆಯಿಂದ ಸುದ್ದಿಗಳು ಬಂದಿವೆ ಎಂದು ಅವರು ಹೇಳಿದ್ದಾರೆ.


Provided by

ಆರನೇ ತರಗತಿಯ ಸಮಾಜ ವಿಜ್ಞಾನ  ಭಾಗ 1ರಲ್ಲಿ ಪಾಠದ ಪೀಠಿಕಾ ರೂಪದ ವಿವರಣೆಯಲ್ಲಿ ಅನಗತ್ಯ ಮತ್ತು ಆರನೇ ತರಗತಿಯ ಮಕ್ಕಳ ವಯೋಮಾನಕ್ಕೆ ಮೀರಿದ  ಪಠ್ಯಾಂಶಗಳಿವೆ ಎಂಬ ಅನೇಕರ ಅಭಿಪ್ರಾಯಕ್ಕೆ ಪೂರಕವಾಗಿ  ಅದನ್ನು ಕೈಬಿಡಲು ನಿರ್ಧರಿಸಿ ಸುತ್ತೋಲೆ ಹೊರಡಿಸಲಾಗಿದೆ. ಬೌದ್ಧ ಮತ್ತು ಜೈನ ಧರ್ಮಗಳ ಪರಿಚಯದ ಪಾಠಗಳಲ್ಲಿ ಕೋಕ್ ನೀಡಿಲ್ಲ. ಆ ಪಾಠಗಳು ಪೂರ್ಣವಾಗಿ ಇರುತ್ತವೆ ಎಂದು ಅವರು ಸ್ಪಷ್ಟಪಡಿಸಿದರು.

2016-17ನೇ ಸಾಲಿನಲ್ಲಿ ಪಠ್ಯಪುಸ್ತಕ ಪರಿಷ್ಕರಣೆಗೊಂಡಂದಿನಿಂದ ಪಠ್ಯಗಳು ಜಾರಿಯಲ್ಲಿವೆ  ಯಾವುದೇ ಸಮುದಾಯದ ಭಾವನೆಗಳಿಗೆ ಧಕ್ಕೆ ತರಬಾರದು, ವಿಶೇಷವಾಗಿ ಮಕ್ಕಳಲ್ಲಿ ಅನಗತ್ಯ ಭಾವನೆಗಳನ್ನು ಬಿತ್ತಬಾರದು ಎನ್ನುವ ಉದ್ದೇಶದಿಂದ ಈ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ. ಬೌದ್ಧ ಧರ್ಮ ಹಾಗೂ ಜೈನ ಧರ್ಮದ ಅವಹೇಳನ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ ಎಂದು ಅವರು ಹೇಳಿದರು.


Provided by

ಯಾರಿಗೋ  ನೋವಾಗುತ್ತದೆ ಎನ್ನುವ ಕಾರಣಕ್ಕೆ ರಾಜ್ಯ ಸರ್ಕಾರವು ಸತ್ಯವನ್ನು ಮುಚ್ಚಿಡಲು ಮುಂದಾಗಿದೆ.  ತಜ್ಞರ ಜೊತೆಗೆ ಚರ್ಚಿಸದೇ ಕೆಲವು ಸಮುದಾಯದವರ ನೀಡಿದ ದೂರನ್ನೇ ಮುಂದಿಟ್ಟುಕೊಂಡು ರಾಜ್ಯ ಸರ್ಕಾರವು ಹೊಸ ಧರ್ಮಗಳ ಉದಯ ಪಾಠಗಳಲ್ಲಿನ ಕೆಲವು ಅಂಶಗಳನ್ನು ತೆಗೆದು ಹಾಕಲು ಮುಂದಾಗಿದೆ ಎನ್ನುವ ಆಕ್ರೋಶಗಳು ವ್ಯಕ್ತವಾಗಿತ್ತು. ಜೊತೆಗೆ  ಪಾಠದಲ್ಲಿರುವುದು ಕಟ್ಟು ಕಥೆ ಅಲ್ಲ ನಿಜವಾದ ಇತಿಹಾಸ. ಹಾಗಾಗಿ ಇದರಲ್ಲಿ ಇನ್ನೊಂದು ಸಮುದಾಯಕ್ಕೆ  ನೋವಾಗುವಂತಹ  ಅಂಶಗಳೇ ಇಲ್ಲ ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ.

ಇತ್ತೀಚಿನ ಸುದ್ದಿ