ಮೃತಪಟ್ಟಿದ್ದಾಳೆ ಎನ್ನಲಾಗಿದ್ದ ನಕ್ಸಲ್ ನಾಯಕಿ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣು
ಶಿವಮೊಗ್ಗ: ಮಲೆನಾಡಿನ ನಕ್ಸಲ್ ನಾಯಕಿ ಹೊಸಗದ್ದೆ ಪ್ರಭಾ ಪೊಲೀಸರಿಗೆ ಶರಣಾಗಿದ್ದು, ಈ ಹಿಂದೆಯೇ ಈಕೆ ಮೃತಪಟ್ಟಿದ್ದಾಳೆ ಎಂಬ ಉಹಾಪೋಹಗಳಿಗೆ ತಮಿಳುನಾಡು ಪೊಲೀಸರು ತೆರೆ ಎಳೆದಿದ್ದಾರೆ.
2010ರಲ್ಲಿಯೇ ಹೊಸಗದ್ದೆ ಪ್ರಭಾ ಮೃತಪಟ್ಟಿದ್ದಾಳೆ ಎನ್ನಲಾಗಿತ್ತು. ಆಗುಂಬೆ ಸಮೀಪದ ಹೊಸಗದ್ದೆಯ ಪ್ರಭಾ ಮನೆಯಲ್ಲಿ ಆಕೆಯ ತಿಥಿಯನ್ನೂ ಮಾಡಲಾಗಿತ್ತು. ಆದರೆ, ಆಕೆಯ ಮೃತದೇಹ ಸಿಗದೇ ಇದ್ದ ಕಾರಣ ಪೊಲೀಸ್ ಇಲಾಖೆ ಪ್ರಭಾ ಮೃತಪಟ್ಟಿದ್ದಾಳೆ ಎಂಬ ಮಾಹಿತಿ ನಿರಾಕರಿಸಿತ್ತು.
ಬಳಿಕ ಪೊಲೀಸ್ ಇಲಾಖೆ ಪ್ರಭಾಳನ್ನು ಹುಡುಕಿಕೊಟ್ಟವರಿಗೆ 5 ಲಕ್ಷ ರೂ. ಬಹುಮಾನವನ್ನೂ ಘೋಷಿಸಿತ್ತು. ಹೊಸಗದ್ದೆ ಪ್ರಭಾ ಪತಿ ಹಾಗೂ ನಕ್ಸಲ್ ಮುಖಂಡ ಬಿ.ಜಿ.ಕೃಷ್ಣಮೂರ್ತಿ ಕೆಲ ತಿಂಗಳ ಹಿಂದೆಯಷ್ಟೇ ಕೇರಳ ಪೊಲೀಸರಿಂದ ಬಂಧನಕ್ಕೊಳಗಾಗಿದ್ದ.
ಪತಿಯ ಬಂಧನದ ಬಳಿಕ ಅನಾರೋಗ್ಯಕ್ಕೆ ತುತ್ತಾಗಿದ್ದ ಪ್ರಭಾ, ನಿನ್ನೆ ತಮಿಳುನಾಡಿನ ವೆಲ್ಲೂರಿನ ಡಿಐಜಿ ಬಾಬು ಎದುರು ಶರಣಾಗಿದ್ದಾಳೆ. ಮಲೆನಾಡಿನ ನಕ್ಸಲ್ ಹೋರಾಟದ ಮುಂಚೂಣಿ ವಹಿಸಿದ್ದ ಪ್ರಭಾ ಮೇಲೆ ಶಿವಮೊಗ್ಗ ಸೇರಿದಂತೆ ವಿವಿಧೆಡೆ ನಲವತ್ತಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಮಂಗಳೂರು: ಕಾಲೇಜು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ; ಅತಿಥಿ ಉಪನ್ಯಾಸಕನ ಬಂಧನ
ಕಾನೂನು ಕೈಗೆತ್ತಿಕೊಳ್ಳುವವರಿಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಬೊಮ್ಮಾಯಿ
ಪನಾಮಾ ಪೇಪರ್ಸ್ ಸೋರಿಕೆ ಪ್ರಕರಣ: ಖ್ಯಾತ ಬಾಲಿವುಡ್ ನಟಿ ಐಶ್ವರ್ಯಾ ರೈ ಗೆ ಇಡಿ ಸಮನ್ಸ್
ಉಡುಪಿಯಲ್ಲಿ ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ: ತಂದೆಗೆ ಜೀವಾವಧಿ ಶಿಕ್ಷೆ
ಸಂಗೊಳ್ಳಿ ರಾಯಣ್ಣ ಪ್ರತಿಮೆ ಹಾನಿ: ಕಿಡಿಗೇಡಿಗಳ ಬಂಧನಕ್ಕೆ ಸಂಸದ ಪ್ರತಾಪ್ ಸಿಂಹ ಸರ್ಕಾರಕ್ಕೆ ಮನವಿ
ಬಿಡಬ್ಲ್ಯುಎಫ್ ವಿಶ್ವ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್: ಕಿಡಂಬಿ ಶ್ರೀಕಾಂತ್ ಗೆ ಬೆಳ್ಳಿ ಪದಕ