ಹೊಸ ವರ್ಷದಂದೇ ಗ್ರಾಹಕರಿಗೆ ತಟ್ಟಿದ ಗ್ಯಾಸ್ ಬೆಲೆ ಏರಿಕೆ ಬಿಸಿ
ನವದೆಹಲಿ: ಹೊಸ ವರ್ಷದ ಸಂಭ್ರಮದ ನಡುವೆಯೇ ಗ್ರಾಹಕರಿಗೆ ವಾಣಿಜ್ಯ ಬಳಕೆಯ ಎಲ್ ಪಿಜಿ ಸಿಲಿಂಡರ್ ಗಳ ದರವನ್ನು 25 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ.
19 ಕೆಜಿಯ ವಾಣಿಜ್ಯ ಸಿಲಿಂಡರ್ ಕರ್ನಾಟಕದ ಬೆಂಗಳೂರಿನಲ್ಲಿ 1,685.5 ರೂ., ದೆಹಲಿಯಲ್ಲಿ 1,768 ರೂ., ಮುಂಬೈನಲ್ಲಿ 1,721 ರೂ., ಕೋಲ್ಕತ್ತಾದಲ್ಲಿ 1,870 ರೂ. ಮತ್ತು ಚೆನ್ನೈನಲ್ಲಿ 1,971 ರೂ. ಏರಿಕೆಯಾಗಿದೆ.
ಹೊಸ ವರ್ಷದ ದಿನವೇ ಗ್ಯಾಸ್ ಬೆಲೆ ಏರಿಸಿರುವುದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಉಡುಗೊರೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಇದು ಆರಂಭ ಅಷ್ಟೇ ಎಂದು ಹಿಂದಿಯಲ್ಲಿ ಟ್ವೀಟ್ ಮಾಡಿದೆ.
ಗ್ಯಾಸ್ ಬೆಲೆ ಏರಿಕೆ ಪ್ರಶ್ನಿಸಿದರೆ ಬಿಜೆಪಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದೆ ಎಂದು ಉತ್ತರಿಸುತ್ತಿತ್ತು. ಆದರೆ ಇದೀಗ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರ ಇಳಿಕೆಯಾದರೂ ಗ್ಯಾಸ್ ಬೆಲೆ ಏರಿಕೆಯಾಗುತ್ತಲೇ ಇದೆ ಎಂದು ವಿಪಕ್ಷಗಳು ವಾಗ್ದಾಳಿ ನಡೆಸಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HeAiP3WAQfT6ajtrJVJ4kP
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka