ರೋಗಿಗೆ ಯೂರಿನ್ ಬ್ಯಾಗ್ ಬದಲು ಸ್ಪ್ರೈಟ್ ಬಾಟಲಿ ಅಳವಡಿಸಿದ ಆಸ್ಪತ್ರೆ ಸಿಬ್ಬಂದಿ!
ಬಿಹಾರದ ಸರ್ಕಾರಿ ಆಸ್ಪತ್ರೆಯೊಂದರಲ್ಲಿ ಆಸ್ಪತ್ರೆಯ ಸಿಬ್ಬಂದಿ ವೈದ್ಯಕೀಯ ಉಪಕರಣಗಳ ಕೊರತೆಯಿಂದಾಗಿ ಅಪಘಾತದಲ್ಲಿ ಗಾಯಗೊಂಡಿದ್ದ ವ್ಯಕ್ತಿಯೊಬ್ಬರಿಗೆ ಮೂತ್ರದ ಚೀಲ(ಯೂರಿನ್ ಬ್ಯಾಗ್)ದ ಬದಲಿಗೆ ಸ್ಪ್ರೈಟ್ ಬಾಟಲಿ ಅಳವಡಿಸಿದ ಘಟನೆ ನಡೆದಿದೆ.
ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಘಟನೆಯ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ.
ವರದಿಗಳ ಪ್ರಕಾರ, ಜಮೈ ಸದರ್ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು, ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿಯನ್ನು ಝಾಝಾ ರೈಲ್ವೆ ಪೊಲೀಸರು ಸೋಮವಾರ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ರೋಗಿಯ ತಪಾಸಣೆ ನಡೆಸಿದ ವೈದ್ಯರು ಯೂರಿನ್ ಬ್ಯಾಗ್ ಅಳವಡಿಸುವಂತೆ ಹೇಳಿದ್ದರು. ಆದ್ರೆ ಯೂರಿನ್ ಬ್ಯಾಗ್ ಲಭ್ಯವಾಗದ ಕಾರಣ ಸಿಬ್ಬಂದಿ ಸ್ಪ್ರೈಟ್ ಬಾಟಲಿಯನ್ನು ಅಳವಡಿಸಿದ್ದಾರೆ.
ಇದೀಗ ಯೂರಿನ್ ಬ್ಯಾಗ್ ಒದಗಿಸದವರನ್ನು ಬಿಟ್ಟು, ಸ್ಪ್ರೈಟ್ ಬಾಟಲಿ ಅಳವಡಿಸಿದ ಸಿಬ್ಬಂದಿಯ ವಿರುದ್ಧ ಕ್ರಮಕ್ಕೆ ಮೇಲಾಧಿಕಾರಿಗಳು ಮುಂದಾಗಿದ್ದಾರೆ. ಸದ್ಯ ಈ ಬಗ್ಗೆ ತನಿಖೆ ನಡೆಯುತ್ತಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw