ತೀವ್ರ ಹೊಟ್ಟೆ ನೋವು ಸಹಿಸಲು ಸಾಧ್ಯವಾಗದೇ ದುಡುಕಿನ ನಿರ್ಧಾರ ತೆಗೆದುಕೊಂಡ ಶಿಕ್ಷಕಿ
22/05/2021
ಕೊಳ್ಳೇಗಾಲ: ಅನಾರೋಗ್ಯದಿಂದ ಬೇಸತ್ತ ಶಿಕ್ಷಕಿಯೊಬ್ಬರು ದುಡುಕಿನ ನಿರ್ಧಾರ ತೆಗೆದುಕೊಂಡ ಘಟನೆ ತಾಲೂಕಿನ ಸಿಂಗನಲ್ಲೂರು ಗ್ರಾಮದಲ್ಲಿ ನಡೆದಿದೆ. ಪಟ್ಟಣದ ಖಾಸಗಿ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಶಿಕ್ಷಕಿಯ ಜೀವನ ದುರಂತ ಅಂತ್ಯವಾಗಿದೆ.
ತಾಲೂಕಿನ ಸಿಂಗನಲ್ಲೂರು ಗ್ರಾಮದ 28 ವರ್ಷ ವಯಸ್ಸಿನ ರಮ್ಯಾ ಅವರು ಹಲವಾರು ದಿನಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದರು. ಹೊಟ್ಟೆ ನೋವಿಗೆ ಸಂಬಂಧಿಸಿದಂತೆ ಅವರು ಚಿಕಿತ್ಸೆ ಕೂಡ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
ಇತ್ತೀಚೆಗೆ ಹೊಟ್ಟೆ ನೋವು ತೀವ್ರವಾಗಿದ್ದು, ಸಹಿಸಿಕೊಳ್ಳಲು ಸಾಧ್ಯವಾಗದ ವೇದನೆಯಿಂದ ಬೇಸತ್ತ ಅವರು ತಮ್ಮ ಮನೆಯಲ್ಲಿ ಕೊಠಡಿಯಲ್ಲಿ ಫ್ಯಾನ್ ಗೆ ಸೀರೆಯಿಂದ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.