ಇಬ್ಬರು ಮಹಿಳೆಯರ ಹೊಟ್ಟೆಯಿಂದ ಕೆಳ ಭಾಗ ಕತ್ತರಿಸಿದ ಮೃತದೇಹ ಪತ್ತೆ: ಬೆಚ್ಚಿಬಿದ್ದ ಜನ - Mahanayaka
5:18 AM Wednesday 11 - December 2024

ಇಬ್ಬರು ಮಹಿಳೆಯರ ಹೊಟ್ಟೆಯಿಂದ ಕೆಳ ಭಾಗ ಕತ್ತರಿಸಿದ ಮೃತದೇಹ ಪತ್ತೆ: ಬೆಚ್ಚಿಬಿದ್ದ ಜನ

mandya
08/06/2022

ಮಂಡ್ಯ: ಪ್ರತ್ಯೇಕ ಘಟನೆಗಳಲ್ಲಿ ಇಬ್ಬರು ಮಹಿಳೆಯರ ಹೊಟ್ಟೆಯಿಂದ ಕೆಳ ಭಾಗವನ್ನು ಕತ್ತರಿಸಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು,  ಮಂಡ್ಯದ ಜನರು ಬೆಚ್ಚಿಬಿದ್ದಿದ್ದಾರೆ.

ಮಂಡ್ಯ ಜಿಲ್ಲೆಯ ಪಾಂಡವಪುರ ಟೌನ್ ಪೊಲೀಸ್ ಹಾಗೂ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಂದು‌ ಒಂದೇ ದಿನ ಹೊಟ್ಟೆಯಿಂದ ಕೆಳಭಾಗ ಕತ್ತರಿಸಿದ ರೀತಿಯಲ್ಲಿ ಇಬ್ಬರು ಮಹಿಳೆಯರ ಮೃತ ದೇಹ ಬೇರೆ ಬೇರೆ ಕಡೆ ಪತ್ತೆಯಾಗಿವೆ.

ಪಾಂಡವಪುರ ತಾಲೂಕಿನ ಬೇಬಿ ಕೆರೆ- ಕೆ.ಬೆಟ್ಟಹಳ್ಳಿ ಮಾರ್ಗ ಮಧ್ಯೆ ಇರುವ ಬೇಬಿ ಕೆರೆಯ ನಾಲೆಯಲ್ಲಿ 30 ರಿಂದ 35 ವರ್ಷ ಪ್ರಾಯವಿರುವ ಮಹಿಳೆಯ ಶವ ಅರ್ಧ ಕತ್ತರಿಸಿದ ರೂಪದಲ್ಲಿ ಪತ್ತೆಯಾಗಿದೆ. ಸಮಾನವಾದ ಮತ್ತೊಂದು ಮಹಿಳೆಯ ಶವ ಶ್ರೀರಂಗಪಟ್ಟಣ ತಾಲೂಕಿನ ಅರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯ ಅರೆ ಕೆರೆ ಗ್ರಾಮದ ಬಳಿಯ ಸಿಡಿಎಸ್ ನಾಲೆಯಲ್ಲಿ‌ ತೇಲಿ ಬಂದು ರೈತನ ಜಮೀನಿನಲ್ಲಿ ಸಿಕ್ಕಿಕೊಂಡಿದೆ.

ಎರಡೂ ಮೃತದೇಹಗಳನ್ನು ಅರ್ಧವಾಗಿ ಕತ್ತರಿಸಿ ಚೀಲದಲ್ಲಿ ಹಾಕಿ ಎರಡು ಕಾಲುಗಳನ್ನು ಕಟ್ಟಿ ಹಾಕಿ ನೀರಿಗೆ ಎಸೆದಿದ್ದಾರೆ. ದೇಹದ ಅರ್ಧಭಾಗ ಪತ್ತೆಯಾಗಿರುವ ಸುದ್ದಿ ತಿಳಿದು ಪಾಂಡವಪುರ ಹಾಗೂ ಅರೆಕೆರೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ‌ ನಡೆಸಿದ್ದಾರೆ. ಎರಡೂ ಕಡೆ ಸಿಕ್ಕಿರುವ ಅರ್ಧ ಕತ್ತರಿಸಿದ ಮೃತ ದೇಹಗಳ ಹೊಟ್ಟೆಯಿಂದ ಕೆಳಗಿನ ಭಾಗ ಮಾತ್ರ ಪತ್ತೆಯಾಗಿದೆ. ಉಳಿದ ಭಾಗ ಇನ್ನೂ ಪತ್ತೆಯಾಗಿಲ್ಲ.ಅಲ್ಲದೆ ಈ ಎರಡು ಶವಗಳ ಉಳಿದರ್ಧ ದೇಹದ ಪತ್ತೆಗೆ ಶೋ ಧ ಕಾರ್ಯ ಆರಂಭಿಸಿದ್ದಾರೆ.

ಪೊಲೀಸರ ಪ್ರಾಥಮಿಕ ತನಿಖೆ ವೇಳೆ ಸಿಕ್ಕಿರುವ ಎರಡೂ ಶವಗಳ ಕಾಲುಗಳನ್ನು ಹಗ್ಗದಿಂದ ಕಟ್ಟಲಾಗಿದ್ದು,ಬೇರೆಲ್ಲೋ ಕೊಲೆ ಮಾಡಿ ಬಳಿಕ ದೇಹ ಕತ್ತರಿಸಿ ಸಾಕ್ಷ್ಯ‌ ನಾಶಕ್ಕೆ ದುಷ್ಕರ್ಮಿಗಳು ಯತ್ನಿಸಿರಬೇಕು ಎಂದು‌ ಪೊಲೀಸರು ಶಂಕಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಬಸ್ಸಿನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿ ಬಂಧನ

ಪರಿಶಿಷ್ಟ ಜಾತಿಯ ಯುವಕನನ್ನು ಪ್ರೀತಿಸಿದ್ದಕ್ಕೆ  ತಂದೆಯಿಂದಲೇ ಯುವತಿಯ ಹತ್ಯೆ!

ತರಗತಿಯಲ್ಲೇ ನಿದ್ದೆ ಹೋದ ಶಿಕ್ಷಕಿಗೆ ಬೀಸಣಿಗೆಯಲ್ಲಿ ಗಾಳಿ ಬೀಸಿದ ವಿದ್ಯಾರ್ಥಿನಿ!

ಪಠ್ಯಪುಸ್ತಕ ಪರಿಷ್ಕರಣೆ ಯಡವಟ್ಟು: ಶಿಕ್ಷಣ ಸಚಿವರಿಗೆ ಮಾಜಿ ಶಿಕ್ಷಣ ಸಚಿವ ಎನ್.ಮಹೇಶ್ ಹೇಳಿದ್ದೇನು?

ಇತ್ತೀಚಿನ ಸುದ್ದಿ