ಚಾರ್ಮಾಡಿ ಅರಣ್ಯ ಪ್ರದೇಶದಲ್ಲಿ ಟ್ರಕ್ಕಿಂಗ್ ಗೆ ಹೋಗಿ ನಾಪತ್ತೆಯಾದ ವ್ಯಕ್ತಿಯನ್ನು ಪತ್ತೆ ಹೆಚ್ಚಿದ್ದು ಹೇಗೆ?
ಚಾರ್ಮಾಡಿ ಅರಣ್ಯ ಪ್ರದೇಶಕ್ಕೆ ಚಾರಣಕ್ಕಾಗಿ ಹೋಗಿದ್ದ ಮಹಾರಾಷ್ಟ್ರದ ನಾಗಪುರ ನಿವಾಸಿ, ಬೆಂಗಳೂರಲ್ಲಿ ಸಾಫ್ಟ್ ವೇರ್ ಇಂಜಿನಿಯರ್ ಆಗಿರೋ ಪರೇಶ್ ಕಿಶಾನ್ ಲಾಲ್ ಅಗರ್ವಾಲ್
ಮೂಡಿಗೆರೆ ರಾಣಿಝರಿ ಫಾಲ್ಸ್ ನಿಂದ ಇಳಿದು ಟ್ರಕ್ಕಿಂಗ್ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿದ್ದರು. ಅವರನ್ನು ಆಹೋರಾತ್ರಿ ಕಾರ್ಯಾಚರಣೆಯ ಬಳಿಕ ಸ್ಥಳೀಯರ ತಂಡ ಪತ್ತೆಹಚ್ಚಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ರಾಣಿಝರಿ ಫಾಲ್ಸ್ ಕಡೆಯಿಂದ ಬಂಡಾಜೆ ಎರ್ಮಾಯಿ ಫಾಲ್ಸ್ ಅರಣ್ಯದ ಕಡೆಗೆ ಇಳಿದು, ರಾತ್ರಿಯಾಗುತ್ತಿದ್ದಂತೆ ಹಸಿವಿನಿಂದ ನಿತ್ರಾಣಕ್ಕೊಳಗಾಗಿ ದಾರಿ ಕಾಣದೆ ಅರಣ್ಯದಲ್ಲಿ ಬಾಕಿಯಾಗಿದ್ದ ಟೆಕ್ಕಿ ದಾರಿ ಕಾಣದೇ ಬೆಂಗಳೂರಿನ ಸಹೋದ್ಯೋಗಳಿಗೆ ತಾನಿರುವ ಲೊಕೇಶನ್ ಕಳಿಸಿದ್ದ.
ಅವರು ಪೊಲೀಸ್ ಕಂಟ್ರೋಲ್ ರೂಂ ಗೆ ಮಾಹಿತಿ ನೀಡಿದ್ದಲ್ಲದೇ ಆ ಸಂದೇಶವನ್ನು ಬೆಂಗಳೂರಿನ ಗ್ರೂಪಿನಲ್ಲಿ ಹಂಚಿಕೊಂಡಿದ್ದರು. ಅದು ಸಂಜೆ ವೇಳೆಗೆ ಚಾರ್ಮಾಡಿಯ ಹೊಟೇಲ್ ಹನೀಫ್ ಅವರಿಗೆ ಗೊತ್ತಾಗಿ ಅವರು ಚಾರ್ಮಾಡಿಯ ಗ್ರೂಪಿಗೆ ಹಾಕಿದ್ದರು. ಇದನ್ನು ನೋಡಿದ ಸಿನಾನ್ ಚಾರ್ಮಾಡಿ ಅವರು ಬಾಳೂರು ಪೊಲೀಸರು ಹಾಗೂ ಬೆಳ್ತಂಗಡಿಯ ಅರಣ್ಯ ಇಲಾಖೆಯವರ ಸಹಕಾರದೊಂದಿಗೆ ಚಾರ್ಮಾಡಿ ವ್ಯಾಪ್ತಿಯ ಸ್ಥಳೀಯರಾದ ಮುಬಶ್ಶಿರ್, ಕಾಜೂರಿನ ಎರ್ಮಾಲ್‌ಪಲ್ಕೆ,ಅಶ್ರಫ್, ಕಾಜೂರಿನ ಶಂಸು, ನಾಸೀರ್ ಇವರ ತಂಡ ಸೇರಿ ಹುಡುಕಾಟ ಕಾರ್ಯಾಚರಣೆ ನಡೆಸಿದರು.
ಇತ್ತ ಸುಧೀರ್ ವಳಂಬ್ರ, ಜನಾರ್ದನ, ಪೊಲೀಸ್ ಇಲಾಖೆಯ ಶಶಿಧರ, ಆಸಿಫ್ ಸೋಮಂತಡ್ಕ, ಜೀವರಕ್ಷಕ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಇವರುಗಳು ಸೇರಿ ಪತ್ತೆಗೆ ಸಾಥ್ ಕೊಟ್ಟಿದ್ದಾರೆ. ಸಿನಾನ್ ಚಾರ್ಮಾಡಿ ನೇತೃತ್ವದ ಒಂದು ತಂಡ ಮತ್ತು ಜಲೀಲ್, ಶಿಶಧರ ಅವರ ನೇತೃತ್ವದ ಎರಡು ತಂಡಗಳಾಗಿ ಪತ್ತೆ ಕಾರ್ಯಾಚರಣೆ ನಡೆದಿದೆ. ಸಂಜೆ 5 ಗಂಟೆಗೆ ಹೊರಟ ತಂಡ 12 ಗಂಟೆ ರಾತ್ರಿಗೆ ದಟ್ಟ ಅರಣ್ಯದಲ್ಲಿ ಆತ ನನ್ನು ಪತ್ತೆ ಹಚ್ಚಿದೆ.
ಆವರಿಸಿದ ಕತ್ತಲೆ, ಜಾರುವ ಬಂಡೆಕಲ್ಲುಗಳ ಅಪಾಯಕಾರಿ ಇಳಿಜಾರು ಪ್ರದೇಶ, ಇಂಬಳಗಳ ತೀವ್ರ ಕಾಟ. ಇದರ ಮಧ್ಯೆ ಮರಗಳ ಮೇಲೆ ಹತ್ತಿಕೊಂಡು ಸಾಹಸಮಯವಾಗಿ ತಂಡ ಅಲ್ಲಿ ತಲುಪುವಷ್ಟರಲ್ಲಿ ಟೆಕ್ಕಿ ಹಸಿವು,ಮತ್ತು ಭಯದಿಂದ ತತ್ತರಿಸಿ ತೀವ್ರ ಬಸವಳಿದು ಹೋಗಿದ್ದ. ಬಿಸ್ಕೆಟ್ ಮತ್ತು ಪಾನೀಯ ಕುಡಿಸಿ ಸ್ವಲ್ಪ ಸುಧಾರಿಸಿಕೊಂಡು ಅಲ್ಲಿಂದ ಆತನನ್ನು ಹೊತ್ತುಕೊಂಡು ಬೆಳಗ್ಗೆ 4:30 ರ ವೇಳೆಗೆ ಕಾಜೂರಿಗೆ ಕರೆತರಲಾಯಿತು.
ತಂಡಕ್ಕೆ ಅಲ್ಲಿ ಊಟದ ವ್ಯವಸ್ಥೆ ಮಾಡಲಾಗಿತ್ತು. ಅಷ್ಟರಲ್ಲಿ ಎಲ್ಲರೂ ದೈಹಿಕವಾಗಿ ಸೋತುಹೋಗಿದ್ದರು. ಟೆಕ್ಕಿ ಸಿಲುಕಿಕೊಂಡಿದ್ದ ಪ್ರದೇಶದಲ್ಲಿ ಸಮರ್ಪಕ ನೆಟ್ವರ್ಕ್ ಕೂಡ ಇರಲಿಲ್ಲ. ಆಗಾಗ ಅಲ್ಪ ಸ್ವಲ್ಪ ಸಂಪರ್ಕ ಬಳಸಿ ಕೊನೆಗೂ ಆತನನ್ನು ಪತ್ತೆಹಚ್ಚುವಲ್ಲಿ ಯಶಸ್ವಿಯಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw