ಹೃದಯ ವಿದ್ರಾವಕ ಘಟನೆ: ಹುಟ್ಟುಹಬ್ಬದಂದೇ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಮಗು - Mahanayaka

ಹೃದಯ ವಿದ್ರಾವಕ ಘಟನೆ: ಹುಟ್ಟುಹಬ್ಬದಂದೇ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಮಗು

niveditha
16/09/2021

ಚಾಮರಾಜನಗರ: ಬಾಲಕಿಯೋರ್ವಳು ತನ್ನ ಹುಟ್ಟು ಹಬ್ಬದಂದೇ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಚಾಮರಾಜನಗರ ತಾಲೂಕಿನ ಕೆಂಗಾಕಿ ಗ್ರಾಮದಲ್ಲಿ ನಡೆದಿದ್ದು, ಮಗುವಿನ ಹುಟ್ಟು ಹಬ್ಬದ ಸಂತಸದಲ್ಲಿದ್ದ ಪೋಷಕರು ಇದೀಗ ಶೋಕ ಸಾಗರದಲ್ಲಿ ಮುಳುಗಿದ್ದಾರೆ.


Provided by

3 ವರ್ಷ ವಯಸ್ಸಿನ ನಿವೇದಿತಾ ಮೃತಪಟ್ಟ ಬಾಲಕಿಯಾಗಿದ್ದಾಳೆ. ನಿವೇದಿತಾಗೆ 3 ವರ್ಷ ತುಂಬಿದ ಖುಷಿಯಲ್ಲಿ ಕೇಕ್ ತರಿಸಿ ಮನೆಯವರೆಲ್ಲ ಖುಷಿಯಿಂದ ಸಂಭ್ರಮಿಸಿದ್ದರು. ಆದರೆ, ಮನೆ ತುಂಬಾ ಓಡಾಡುತ್ತಾ, ಪೋಷಕರ ಮನಸ್ಸಿಗೆ ನೀಡುತ್ತಿದ್ದ ನಿವೇದಿತ ಕೆಲವೇ ನಿಮಿಷಗಳಲ್ಲಿ ಚಿರನಿದ್ರೆಗೆ ಜಾರಿರುವುದರಿಂದ ಹಬ್ಬದ ಸಂಭ್ರಮದಲ್ಲಿದ್ದ ಮನೆಯಲ್ಲಿ ಶೋಕ ಮಡುಗಟ್ಟಿದೆ.

ನಿವೇದಿತಾ ಕುಟುಂಬ ತೋಟದ ಮನೆಯಲ್ಲಿ ವಾಸವಿದ್ದು, ಹುಟ್ಟು ಹಬ್ಬದ ಸಂಭ್ರಮದಲ್ಲಿದ್ದ ಬಾಲಕಿ ಆಟವಾಡುತ್ತಾ, ಪಂಬ್ ಸೆಟ್ ಮುಟ್ಟಿದ್ದಾಳೆ. ಈ ವೇಳೆ ಮಗುವಿನ ಮೇಲೆ ವಿದ್ಯುತ್ ಪ್ರವಹಿಸಿದೆ ಎಂದು ತಿಳಿದು ಬಂದಿದೆ.

ಘಟನೆ ಸಂಬಂಧ ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿದ್ದು, ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡು, ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಜರಗಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ಇನ್ನಷ್ಟು ಸುದ್ದಿಗಳು…

ಶಾಕಿಂಗ್ ನ್ಯೂಸ್: ಭಾರತದಲ್ಲಿ ಪ್ರತಿದಿನ 80 ಕೊಲೆ, 77 ಅತ್ಯಾಚಾರ ಪ್ರಕರಣಗಳು ದಾಖಲಾಗ್ತಿವೆ!

ಕಬಡ್ಡಿ ತರಬೇತಿ ಕೇಂದ್ರದಲ್ಲಿ ತಂದೆ, ಮಗನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ!

ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನವನ್ನೂ ಕೆಡವಿದ್ದಾರೆ | ಯು.ಟಿ.ಖಾದರ್ ಆಕ್ರೋಶ

ಮಹಿಳೆ ಮೃತಪಟ್ಟು ನಾಲ್ಕು ತಿಂಗಳ ಬಳಿಕ ಕೊರೊನಾ ಲಸಿಕೆ ನೀಡಿದ ಆರೋಗ್ಯ ಕೇಂದ್ರ!

ದೇವಸ್ಥಾನ ತೆರವು ವಿಚಾರ: ಬಿಜೆಪಿ, ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಗೆ ಪರ್ಯಾಯ ರಾಜಕೀಯ ಪಕ್ಷ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ | ಡಾ.ಎಂ.ವೆಂಕಟಸ್ವಾಮಿ

ಇತ್ತೀಚಿನ ಸುದ್ದಿ