ಗಣೇಶ ವಿಸರ್ಜನೆ ಬಂದೋಬಸ್ತ್ ನಲ್ಲಿದ್ದ ಹೆಡ್ ಕಾನ್ಸ್’ಸ್ಟೇಬಲ್ ಹೃದಯಾಘಾತದಿಂದ ಸಾವು
ಕಲಬುರಗಿ: ಗಣೇಶೋತ್ಸವದಲ್ಲಿ ಕರ್ತವ್ಯ ನಿರತರಾಗಿದ್ದ ಹೆಡ್ ಕಾನ್ಸ್’ಸ್ಟೇಬಲ್ ವೊಬ್ಬರು ಹೃದಯಾಘಾತದಿಂದ ಮೃತಪಟ್ಟ ದಾರುಣ ಘಟನೆ ಕಲಬುರ್ಗಿ ಜಿಲ್ಲೆಯ ಅಫಜಲಪುರದಲ್ಲಿ ನಡೆದಿದೆ.
ಅಫಜಲಪುರ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಸ್ಟೇಬಲ್ ಆಗಿದ್ದ ಗೊಬ್ಬುರು ಬಿ ಗ್ರಾಮದ ನಿವಾಸಿ ಕಲ್ಯಾಣಿ ಗುಗ್ಗರಿ(45) ಮೃತಪಟ್ಟವರು ಎಂದು ಗುರುತಿಸಲಾಗಿದೆ.
ಗಣೇಶ ವಿಸರ್ಜನೆ ಕಾರ್ಯಕ್ರಮದ ಬಂದೋಬಸ್ತ್ ನಲ್ಲಿದ್ದ ವೇಳೆ ಏಕಾಏಕಿ ಅವರು ನಿತ್ರಾಣಗೊಂಡಿದ್ದರು. ಹೀಗಾಗಿ ತಮ್ಮ ರೂಮ್ ಗೆ ಹೋಗಿ ವಿಶ್ರಾಂತಿ ಪಡೆಯುತ್ತಿದ್ದರು ಎನ್ನಲಾಗಿದೆ.
ಇಂದು ಬೆಳಗ್ಗಿನ ಜಾವ ಅವರಿಗೆ ಹೃದಯಾಘಾತವಾಗಿದ್ದು, ಹೃದಯಾಘಾತವಾಗಿರುವುದು ಸ್ವತಃ ಅವರ ಗಮನಕ್ಕೆ ಬರುತ್ತಿದ್ದಂತೆಯೇ ಅವರು ಆಂಬುಲೆನ್ಸ್ ಗೆ ಕರೆ ಮಾಡಿದ್ದರು. ಸ್ಥಳಕ್ಕೆ ಆಂಬುಲೆನ್ಸ್ ಆಗಮಿಸಿ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ದಾರಿ ಮಧ್ಯೆ ಅವರು ಕೊನೆಯುಸಿರೆಳೆದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Ginhq56yzxz2MmHFl94DFN
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka