ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿ ಸಾವು - Mahanayaka
12:25 PM Wednesday 5 - February 2025

ಹೃದಯಾಘಾತದಿಂದ 7ನೇ ತರಗತಿ ವಿದ್ಯಾರ್ಥಿ ಸಾವು

sohan ram
25/03/2021

ಚಿಕ್ಕಮಗಳೂರು: 7ನೇ ತರಗತಿ ಬಾಲಕನೋರ್ವ ಹೃದಯಾಘಾತದಿಂದ ಮೃತಪಟ್ಟ ಆತಂಕಕಾರಿ ಘಟನೆ ಜಿಲ್ಲೆಯ ಎನ್.ಆರ್.ಪುರ ತಾಲೂಕಿನಲ್ಲಿ ನಡೆದಿದ್ದು,  ಇಂದು ಬೆಳಗ್ಗೆ ಈ ಘಟನೆ ನಡೆದಿದೆ.

12 ವರ್ಷದ ಸೋಹನ್ ರಾಮ್ ಮೃತಪಟ್ಟ ಬಾಲಕನಾಗಿದ್ದಾನೆ. ಇಂದು ಬೆಳಗ್ಗೆ  ಮೆಸ್ಕಾಂ ಕಚೇರಿ ಬಳಿಯಲ್ಲಿ ಬಾಲಕ ಸೈಕಲ್ ಓಡಿಸುತ್ತಿದ್ದ ಸಂದರ್ಭದಲ್ಲಿ ಏಕಾ ಏಕಿ ಬಾಲಕ ಕುಸಿದು ಬಿದ್ದಿದ್ದಾನೆ

ಬಾಲಕ ಕುಸಿದು ಬಿದ್ದದ್ದನ್ನು ಕಂಡ ಸಾರ್ವಜನಿಕರು ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲು ಯತ್ನಿಸಿದರು. ಆದರೆ ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯೆ ಬಾಲಕ ಸಾವನ್ನಪ್ಪಿದ್ದಾನೆ.  ಬಾಲಕನ ಸಾವಿಗೆ ಹೃದಯಾಘಾತ ಕಾರಣ ಎಂದು ವೈದ್ಯರು ಹೇಳಿದ್ದಾರೆ.

ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಹೃದಯಾಘಾತ ಹೇಗಾಯಿತು ಎಂಬ ಅಚ್ಚರಿ ಒಂದೆಡೆಯಾದರೆ, ಇಷ್ಟು ಚಿಕ್ಕ ವಯಸ್ಸಿನಲ್ಲಿಯೇ ಬಾಲಕ ಮೃತಪಟ್ಟನಲ್ಲ ಎಂಬ ನೋವು ಇನ್ನೊಂದೆಡೆ. ಬಾಲಕನ ಮನೆಯ ಮುಂದೆ ಮೌನ ಆವರಿಸಿದ್ದು, ತಾಲೂಕಿನ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಬಾಲಕನ ಸಾವಿಗೆ ಕಂಬನಿ ಮಿಡಿದಿದ್ದಾರೆ.

ಕೆಲವೇ ದಿನಗಳ ಹಿಂದೆ ಪುತ್ತೂರಿನಲ್ಲಿ ಇಂತಹದ್ದೇ ಘಟನೆ ನಡೆದಿತ್ತು. ಇಲ್ಲಿನ 16 ವರ್ಷ ವಯಸ್ಸಿನ ಬಾಲಕಿ ಬೆಳ್ಳಂಬೆಳಗ್ಗೆ ಅನಾರೋಗ್ಯಕ್ಕೀಡಾಗಿದ್ದು, ಬಳಿಕ ಆಸ್ಪತ್ರೆಗೆ ದಾಖಲಿಸುವ ವೇಳೆ ಮೃತಪಟ್ಟಿದ್ದಳು. ಈಕೆ ಕೂಡ ಹೃದಯಾಘಾತದಿಂದಲೇ ಮೃತಪಟ್ಟಿದ್ದಾಳೆ ಎಂದು ವೈದ್ಯರು ಹೇಳಿದ್ದರು.

ಇದನ್ನೂ ಓದಿ:

16 ವರ್ಷದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು!

ಇತ್ತೀಚಿನ ಸುದ್ದಿ