ಹೃದಯಾಘಾತದಿಂದ 17 ವರ್ಷದ ಬಾಲಕ ಸಾವು!
09/08/2022
ಬೆಳ್ತಂಗಡಿ; ತಾಲೂಕಿನ ನೆರಿಯ ಗ್ರಾಮದ ಪಿಲಿಕಳ ಪಂಪ್ ಹೌಸ್ ಬಳಿಯ ನಿವಾಸಿ ಸಚಿನ್ (17) ಆ.9 ರಂದು ಹೃದಯಘಾತದಿಂದ ಸ್ವಗೃಹದಲ್ಲಿ ನಿಧನ ಹೊಂದಿದ್ದಾರೆ.
ಮುಂಡಾಜೆ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ಕಲಾವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದ ಈತ ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ಎಂದು ಹೇಳಲಾಗಿದೆ.
ಆ .9 ರಂದು ಕಾಲೇಜಿಗೆ ರಜೆ ಇದ್ದು, ಮನೆಯಲ್ಲಿದ್ದ ಸಂದರ್ಭ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ಅವಳಿ ಮಕ್ಕಳ ಪೈಕಿ ಓರ್ವರಾಗಿರುವ ಸಚಿನ್ ಗೆ ತಂದೆ,ತಾಯಿ, ಹಾಗೂ ಇಬ್ಬರು ಸಹೋದರರಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka