ಹುಬ್ಬಳ್ಳಿ ಬಾಲಕಿಯ ಹತ್ಯೆ ಕೇಸ್: ಮರಣೋತ್ತರ ಪರೀಕ್ಷೆಯಲ್ಲಿ ಕಾಮುಕನ ಕುಕೃತ್ಯ ಬಯಲು

ಹುಬ್ಬಳ್ಳಿ: 5 ವರ್ಷದ ಬಾಲಕಿಯ ಹತ್ಯೆ ಆರೋಪಿಯನ್ನು ಪೊಲೀಸರು ಗುಂಡು ಹಾರಿಸಿ ಹತ್ಯೆ ಮಾಡಿರುವ ಬೆನ್ನಲ್ಲೇ ಇದೀಗ ಬಾಲಕಿಯ ಮರಣೋತ್ತರ ಪರೀಕ್ಷೆ ವರದಿ ಲಭ್ಯವಾಗಿದ್ದು, ವರದಿಯಲ್ಲಿ ಕಾಮುಕನ ಕುಕೃತ್ಯ ಬಯಲಾಗಿದೆ.
ಬಾಲಕಿಯ ಅಪಹರಣ ಮತ್ತು ಕೊಲೆ ಪ್ರಕರಣದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಬಗ್ಗೆ ಆರೋಪ ಕೇಳಿ ಬಂದಿತ್ತು. ಆದರೆ ಪೊಲೀಸರು ದೃಢಪಡಿಸಿರಲಿಲ್ಲ, ಇದೀಗ ಬಾಲಕಿಯ ಮರಣೋತ್ತರ ಪರೀಕ್ಷೆಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಲಾಗಿರುವುದು ಬೆಳಕಿಗೆ ಬಂದಿದೆ.
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಕಾಮುಕ ನಂತರ ಕೊಲೆ ಮಾಡಿದ್ದಾನೆ. ಬಾಲಕಿಯ ಲೆಗ್ಗಿನ್ಸ್ ನ್ನು ತನ್ನ ಪ್ಯಾಂಟಿನಲ್ಲಿ ಇಟ್ಟುಕೊಂಡು, ವಿಕೃತ ಕಾಮಿಯಂತೆ ವರ್ತಿಸಿದ್ದಾನೆ ಎಂದು ತಿಳಿದುಬಂದಿದೆ. ಈ ಕುರಿತ ಮಾಹಿತಿ ಇನ್ನಷ್ಟೇ ಹೊರಬರಬೇಕಿದೆ. ಮರಣೋತ್ತರ ಪರೀಕ್ಷಾ ವರದಿ ಅಧಿಕೃತವಾಗಿ ಹೊರಬರಬೇಕಿದೆ.
ಪ್ರಕರಣ ಸಂಬಂಧ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಸೋಮವಾರ ಮೃತ ಬಾಲಕಿಯ ಪೋಷಕರನ್ನು ಭೇಟಿ ಮಾಡಿದ್ದು, ಮಾತುಕತೆ ನಡೆಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: