ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿ

ಹುಬ್ಬಳ್ಳಿ: ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಅತ್ಯಾಚಾರಕ್ಕೆ ಯತ್ನಿಸಿ ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿರವ ಘಟನೆ ನಡೆದಿದೆ.
ಬಿಹಾರ ಮೂಲದ ರಿತೇಶ್ ಕುಮಾರ್ ಸಾವಿಗೀಡಾದವನಾಗಿದ್ದಾನೆ. ಹುಬ್ಬಳ್ಳಿಯ ವಿಜಯನಗರದಲ್ಲಿನ ಮನೆಯೊಂದರ ಮುಂದೆ ಆಟವಾಡುತ್ತಿದ್ದ ಬಾಲಕಿಗೆ ಆರೋಪಿ ರಿತೇಶ್ ಚಾಕೊಲೇಟ್ ಆಸೆ ತೋರಿಸಿ ಎತ್ತಿಕೊಂಡು ಹೋಗುತ್ತಿರುವ ದೃಶ್ಯ ಸಿಸಿ ಟಿವಿ ಕ್ಯಾಮರಾದಲ್ಲಿ ಸೆರೆಯಾಗಿತ್ತು.
ಬಾಲಕಿಯ ಹೆತ್ತವರು ಕೂಲಿ ಕಾರ್ಮಿಕರಾಗಿದ್ದು, ತಂದೆ ಪೈಂಟಿಂಗ್ ಕೆಲಸ ಮತ್ತು ತಾಯಿ ಮನೆಗೆಲಸ ಮಾಡುತ್ತಿದ್ದರು. ರವಿವಾರ ತಾಯಿಯ ಜೊತೆಗೆ ಬಾಲಕಿ ವಿಜಯನಗರಕ್ಕೆ ಕೆಲಸಕ್ಕೆ ಬಂದಿದ್ದಳು. ತಾಯಿ ಕೆಲಸ ಮಾಡುತ್ತಿದ್ದ ವೇಳೆ ಮನೆಯ ಹೊರಗೆ ಬಾಲಕಿ ಆಟವಾಡುತ್ತಿದ್ದ ವೇಳೆ, ಆರೋಪಿ ಚಾಕೊಲೇಟ್ ಆಸೆ ತೋರಿಸಿ ಹೊತ್ತೊಯ್ದಿದ್ದು, ಬಳಿಕ ಅಧ್ಯಾಪಕ ನಗರದಲ್ಲಿನ ಖಾಲಿ ಜಾಗದಲ್ಲಿ ಬಾಲಕಿ ಶವ ಪತ್ತೆಯಾಗಿತ್ತು.
ಈ ಪ್ರಕರಣ ಸಂಬಂಧ ಆರೋಪಿಯ ಮಾಹಿತಿ ತಿಳಿದು ಪೊಲೀಸರು ಸ್ಥಳಕ್ಕೆ ಬಂಧಿಸಲು ತೆರಳಿದ್ದಾರೆ. ಈ ವೇಳೆ ಆರೋಪಿ ರಿತೇಶ್ ಪೊಲೀಸರ ಮೇಲೆ ದಾಳಿ ಮಾಡಿ ಪರಾರಿಯಾಗಲು ಯತ್ನಿಸಿದ್ದಾನೆ. ಪೊಲೀಸರು ಆತ್ಮರಕ್ಷಣೆಗಾಗಿ ಹಾರಿಸಿದ ಗುಂಡು ಆರೋಪಿಯ ಬೆನ್ನಿಗೆ ತಗುಲಿದ್ದು, ಪರಿಣಾಮವಾಗಿ ರಿತೇಶ್ ಗಂಭೀರವಾಗಿ ಗಾಯಗೊಂಡಿದ್ದನು. ಆತನನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಆತ ಸಾವನ್ನಪ್ಪಿದ್ದಾನೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: