ಚಂಡಮಾರುತದ ಹೊಡೆತಕ್ಕೆ ಮನೆ ಮೇಲೆ ಉರುಳಿ ಬಿದ್ದ ಬೃಹತ್ ಮರ!
ಮೂಡಿಗೆರೆ: ತಾಲೂಕಿನ ಮರ್ಕಲ್ ಗ್ರಾಮದ ಅರೆಕೊಡಿಗೆ ಸುಕಲಮಕ್ಕಿ ನರೇಂದ್ರ ಗೌಡ ರವರ ಮನೆಗೆ ರಾತ್ರಿ 12:30 ಸಮಯದಲ್ಲಿ ಬೃಹದಾಕಾರದ ಮರವೊಂದು ಉರುಳಿ ಬಿದ್ದ ಘಟನೆ ನಡೆದಿದೆ.
ಮರ ಬಿದ್ದ ಪರಿಣಾಮ ಮನೆ ಸಂಪೂರ್ಣ ಹಾನಿಯಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಸಾವಿನದವಡೆಯಿಂದ ಪಾರಾಗಿದ್ದಾರೆ.
ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ ಮಲೆನಾಡಿನದ್ಯಂತ ಜನಜೀವನ ಹಸ್ತವ್ಯಸ್ತವಾಗಿದೆ ಕಾಫಿ ಬತ್ತ ಮೊದಲಾದ ಬೆಳೆಗಳು ನೆಲಕೆಚ್ಚಿ ಹೋಗಿದ್ದು ರೈತರು ಕಂಗಾಲಾಗಿ ಹೋಗಿದ್ದಾರೆ. ನಿರಂತರವಾಗಿ ಮಳೆಯಾಗುತ್ತಿದ್ದು ಇಂದು ಸುರಿದ ಮಳೆಗೆ ಮರ ಬಿದ್ದು ಈ ದುರಂತ ಸಂಭವಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka