ಹಾಸನದಲ್ಲಿ 20 ವರ್ಷಗಳ ನಂತರ ಕಾಂಗ್ರೆಸ್ ಗೆ ಭರ್ಜರಿ ಗೆಲುವು: ಪ್ರಜ್ವಲ್ ರೇವಣ್ಣಗೆ ಸೋಲು

ಹಾಸನದ ಲೋಕಸಭಾ ಕ್ಷೇತ್ರದಲ್ಲಿ 20 ವರ್ಷದ ಬಳಿಕ ಹಾಸನ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಭರ್ಜರಿ ಗೆಲುವು ದಾಖಲಿಸಿದೆ.
ಆರಂಭದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಮುನ್ನಡೆ ಸಾಧಿಸಿದ್ದರು. ಆಮೇಲೆ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರು ತೀವ್ರ ಪೈಪೋಟಿ ನೀಡಿದ್ದರು. ಆದರೆ ಮುಂದಿನ ಹಂತದ ಮತಎಣಿಕೆಯಲ್ಲಿ ಪ್ರಜ್ವಲ್ ರೇವಣ್ಣ ಅವರು ಸತತ ಹಿನ್ನಡೆ ಅನುಭವಿಸಿ ತೀವ್ರ ಮುಖಭಂಗ ಅನುಭವಿಸಿದ್ದಾರೆ.
ಹಾಸನದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರ ಭರ್ಜರಿ ಜಯ ಸಾಧಿಸಿದ್ದು, ಅಧಿಕೃತ ಘೋಷಣೆ ಬಾಕಿ ಉಳಿದಿದೆ.
16ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾದಾಗ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ಅವರು 4 ಲಕ್ಷ 2 ಸಾವಿರ 261 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/JItjEWZ9e5fBWDL6CkTr97
ಫೇಸ್ ಬುಕ್ ಪೇಜ್ ಫಾಲೋ ಮಾಡಿ: https://www.facebook.com/profile.php?id=61556202767068