ಹುಲಿ ಚರ್ಮ ಮಾರಾಟಕ್ಕೆ ಯತ್ನ: ನಾಲ್ವರು ಆರೋಪಿಗಳ ಬಂಧನ
ಕೊಡಗು: ಹುಲಿಯನ್ನು ಕೊಂದು ಅದರ ಚರ್ಮವನ್ನು ಮಾರಾಟ ಮಾಡಲು ಯತ್ನಿಸಿದ ನಾಲ್ವರು ಆರೋಪಿಗಳನ್ನು ಅರಣ್ಯ ಸಂಚಾರಿ ದಳದ ಪೊಲೀಸರು ಬಂಧಿಸಿರುವ ಘಟನೆ ಕೊಡಗು ಜಿಲ್ಲೆಯ ಸಿದ್ದಾಪುರ ಸಮೀಪದ ಮಾಲ್ದಾರೆಯಲ್ಲಿ ನಡೆದಿದೆ.
ಬಂಧಿತ ಆರೋಪಿಗಳನ್ನು ಹರೀಶ್, ರಮೇಶ್, ಮನು ಹಾಗೂ ರಾಜೇಶ್ ಎಂದು ಗುರುತಿಸಲಾಗಿದೆ. ವಯಸ್ಸಾದ ಹುಲಿ ಕೊಂದು, ಅದರ ಚರ್ಮ, ಉಗುರು ಹಾಗೂ ಪಾದಗಳನ್ನು ಕತ್ತರಿಸಿ ಮಾರಾಟ ಮಾಡಲು ಯತ್ನಿಸಿದ್ದರು. ಈ ಭಾಗದಲ್ಲಿ ಹುಲಿಗಳನ್ನು ಕೊಂದು ಅದರ ಚರ್ಮ ಹಾಗೂ ಇತರ ಭಾಗಗಳನ್ನ ಕತ್ತರಿಸಿ ಮಾರಾಟ ಮಾಡುತ್ತಿದ್ದಾರೆ ಎಂಬ ಖಚಿತ ಮಾಹಿತಿಯ ಮೇರೆಗೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬಂಧಿತ ಆರೋಪಿಗಳಿಂದ ಹುಲಿಯ ಚರ್ಮ, 7 ಉಗುರು, 2 ಕಾಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಪ್ರಕರಣ ಕುರಿತಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ತನಿಖೆ ಕೈಗೊಂಡಿದ್ದಾರೆ ಎಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Hh9JYuKnSXBFVRDGeDU97Z
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಕಾವೇರಿ ಹೋರಾಟಗಾರ, ಮಾಜಿ ಶಾಸಕ, ಎಚ್.ಡಿ.ಚೌಡಯ್ಯ ನಿಧನ
ರೈಲು ಹಳಿಯ ಮೇಲೆ ನಿಂತು ಸೆಲ್ಫಿ: ನಾಲ್ವರು ಯುವಕರ ದುರ್ಮರಣ
ಅಮ್ಮನ ಸಾವಿಗೆ ಕಾರಣವಾದ ಮಗಳ ವಾಟ್ಸಾಪ್ ಸ್ಟೇಟಸ್
ಪ್ರತಿಭಟನೆ ನಡೆಸುತ್ತಿದ್ದ ಆಸಿಫ್ ಆಪತ್ಭಾಂಧವ ಮೇಲೆ ಮಂಗಳಮುಖಿಯರಿಂದ ಹಲ್ಲೆ ಯತ್ನ