ಗಂಡ—ಹೆಂಡತಿ ಸಾವಿಗೆ ಶರಣಾಗಲು ಯತ್ನ: ಪತಿ ಸಾವು, ಪತ್ನಿಗೆ ಗಂಭೀರ ಗಾಯ
ಗಂಡ-ಹೆಂಡತಿ ಇಬ್ಬರು ಸಾವಿಗೆ ಶರಣಾಗಲು ಯತ್ನಿಸಿ ಪತಿ ಸಾವನ್ನಪ್ಪಿ, ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆಯು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಕೊಡಾಜೆ ಅನಂತಾಡಿ ಸಮೀಪ ನಡೆದಿದೆ.
ಮೃತರನ್ನು ಕೊಡಾಜೆ ನಿವಾಸಿ ಪ್ರತಾಪ್ (33) ಎಂದು ಗುರುತಿಸಲಾಗಿದೆ. ಪ್ರತಾಪ್ ರವರು ಖಾಸಗಿ ಬಸ್ ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದು, ಇಂದು ಪತಿ, ಪತ್ನಿ ಇಬ್ಬರು ನೇಣು ಬಿಗಿದು ಸಾವಿಗೆ ಶರಣಾಗಲು ಯತ್ನಿಸಿದ್ದು, ಘಟನೆಯಲ್ಲಿ ಪ್ರತಾಪ್ ರವರು ಸಾವನ್ನಪ್ಪಿ, ಪತ್ನಿ ಗಂಭೀರ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ.
ಅರುಣ್ ಪುತ್ತಿಲ ಭೇಟಿ ರವರು ಪುತ್ತೂರು ಆಸ್ಪತ್ರೆಯಿಂದ ಪ್ರತಾಪ್ ರವರ ಪತ್ನಿಯನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲು ಸಹಕರಿಸಿದರು. ಇವರಿಬ್ಬರಿಗೆ ಅವಳಿ ಜವಳಿ ಮಕ್ಕಳಿದ್ದಾರೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw