ಪತಿ ಅಪಘಾತದಲ್ಲಿ ಸಾವು, ಮನನೊಂದ ಪತ್ನಿ ಸಾವಿಗೆ ಶರಣು
ಶಿವಮೊಗ್ಗ: ಪತಿ ಅಪಘಾತದಲ್ಲಿ ಮೃತಪಟ್ಟ ಸುದ್ದಿ ಕೇಳಿ ನೊಂದ ಪತ್ನಿ, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸ ನಗರ ತಾಲೂಕಿನ ಕಿಲ್ಲೆ ಕ್ಯಾತರ ಕ್ಯಾಂಪ್ ನಲ್ಲಿ ನಡೆದಿದೆ.
ಮಂಜುನಾಥ್(25) ಜ ಬೈಕ್ ನಲ್ಲಿ ಹೋಗುತ್ತಿದ್ದ ವೇಲೆ ಶಿಕಾರಿಪುರ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ, ಚಿಕಿತ್ಸೆ ಫಲಿಸದೇ ಅವರು ನಿನ್ನೆ ಮೃತಪಟ್ಟಿದ್ದರು.
ಪತಿ ಸಾವನ್ನಪ್ಪಿದ ಸುದ್ದಿ ಕೇಳಿ ಮನನೊಂದ ಪತ್ನಿ ಅಮೃತ(21) ಫ್ಯಾನ್ ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಒಂದು ವರ್ಷಗಳ ಹಿಂದೆ ಮಂಜುನಾಥ್ ಹಾಗೂ ಅಮೃತ ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಇದೀಗ ಇಬ್ಬರೂ ಸಾವಿನಲ್ಲೂ ಒಂದಾಗಿದ್ದಾರೆ. ಹೊಸನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: