ಪತ್ನಿಯ ಕಪಾಳಕ್ಕೆ ಹೊಡೆದ ಪತಿ: ಪ್ರಾಣ ಬಿಟ್ಟ ಪತ್ನಿ!
ಚಾಮರಾಜನಗರ: ಹಣದ ವಿಚಾರಕ್ಕೆ ಪತ್ನಿಯ ಜೊತೆಗೆ ಜಗಳವಾಡಿದ ಪತಿಯೋರ್ವ ಪತ್ನಿಯ ಕಪಾಳಕ್ಕೆ ಹೊಡೆದು ಹತ್ಯೆ ಮಾಡಿದ ಘಟನೆ ಚಾಮರಾಜನಗರ ಜಿಲ್ಲೆ ಮೂಡ್ನಕೊಡು ಗ್ರಾಮದಲ್ಲಿ ನಡೆದಿದೆ.
ಸೌಮ್ಯ (32) ಪತಿಯಿಂದಲೇ ಹತ್ಯೆಗೀಡಾದ ಪತ್ನಿಯಾಗಿದ್ದು, ಮಹೇಶ್ ಎಂಬಾತ ತನ್ನ ಪತ್ನಿಯನ್ನೇ ಹತ್ಯೆ ಮಾಡಿದ ಆರೋಪಿಯಾಗಿದ್ದಾನೆ.
ತಂದೆಯ ಮನೆಯಿಂದ ಹಣ ತರುವಂತೆ ಪತ್ನಿಯನ್ನು ಮಹೇಶ್ ನಿರಂತರವಾಗಿ ಪೀಡಿಸುತ್ತಿದ್ದ ಎನ್ನಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ಗಲಾಟೆ ವೇಳೆ ಪತ್ನಿಯ ಕಪಾಳಕ್ಕೆ ಹೊಡೆದಿದ್ದು, ಪರಿಣಾಮವಾಗಿ ಪತ್ನಿ ದಾರುಣವಾಗಿ ಸಾವನ್ನಪ್ಪಿದ್ದಾಳೆ ಎಂದು ತಿಳಿದು ಬಂದಿದೆ.
ಆರೋಪಿ ಮಹೇಶ್ ಲಕ್ಷಾಂತರ ರೂಪಾಯಿ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಘಟನೆಯ ಬೆನ್ನಲ್ಲೇ ಎಸ್ಪಿ, ಎಎಸ್ಪಿ, ಡಿವೈಎಸ್ಪಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆರೋಪಿ ಮಹೇಶನನ್ನು ಗ್ರಾಮಾಂತರ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DX0jBN1UDJAJ6ORoqqqFkD
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw