ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನು ಹತ್ಯೆ ಮಾಡಿದ ಪಾಪಿ ಪತಿ!
ಬೆಂಗಳೂರು: ಸೀರೆಯಿಂದ ಕತ್ತು ಬಿಗಿದು ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ನೇತ್ರಾವತಿ ಹತ್ಯೆಗೀಡಾದ ಮಹಿಳೆಯಾಗಿದ್ದಾರೆ. ಈಕೆಯ ಪತಿ ವೆಂಕಟೇಶ್ ನಿನ್ನೆ ರಾತ್ರಿ ಪತ್ನಿಯನ್ನು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದು, ಬೆಳಗ್ಗಿನ ವೇಳೆ ನೆರೆ ಹೊರೆಯವರು ಗಮನಿಸಿದಾಗ ಮಹಿಳೆಯನ್ನು ಹತ್ಯೆ ಮಾಡಿರುವುದು ಬೆಳಕಿಗೆ ಬಂದಿದೆ.
ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ವೆಂಕಟೇಶ್ ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಕ್ರೇನ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ವೆಂಕಟೇಶ್ ಪ್ರತಿನಿತ್ಯ ಕುಡಿದು ಬಂದು ಮನೆಯಲ್ಲಿ ಗಲಾಟೆ ಮಾಡುತ್ತಿದ್ದ ಎನ್ನಲಾಗಿದೆ. ನೇತ್ರಾವತಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಇವರಿಬ್ಬರೂ ಕಾಮಾಕ್ಷಿಪಾಳ್ಯದ ರಂಗನಾಥಪುರದಲ್ಲಿ ವಾಸವಿದ್ದರು.
ವೆಂಕಟೇಶ್ ಪ್ರತಿನಿತ್ಯ ಹಣ ನೀಡುವಂತೆ ಪತ್ನಿಯನ್ನು ಪೀಡಿಸಿ ಗಲಾಟೆ ನಡೆಸುತ್ತಿದ್ದ. ಇದೇ ವಿಚಾರದಲ್ಲಿ ನಿನ್ನೆ ರಾತ್ರಿ ಕೂಡ ಗಲಾಟೆ ನಡೆಸಿದ್ದು, ಪತ್ನಿಗೆ ಹಲ್ಲೆ ನಡೆಸಿ ಉಸಿರುಗಟ್ಟಿಸಿ ಬರ್ಬರವಾಗಿ ಹತ್ಯೆ ನಡೆಸಿದ್ದಾನೆ ಎನ್ನಲಾಗಿದೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth