ಹುಟ್ಟೂರಿಗೆ ತಲುಪಿದ ಹಿಂದೂ ಗುತ್ತಿಗೆದಾರ ಸಂತೋಷ್ ಪಾಟೀಲ್ ಪಾರ್ಥಿವ ಶರೀರ
ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪಾರ್ಥಿವ ಶರೀರ ಇಂದು ಹುಟ್ಟೂರು ಬೆಳಗಾವಿ ತಾಲೂಕಿನ ಬಡಸ ಗ್ರಾಮಕ್ಕೆ ತಲುಪಿದೆ.
ಉಡುಪಿಯ ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ಸಂತೋಷ್ ಪಾಟೀಲ್ ಮೃತದೇಹವನ್ನು ಉಡುಪಿಯಿಂದ ಸ್ವಗ್ರಾಮ ಬಡಸ ಗ್ರಾಮಕ್ಕೆ ತರಲಾಗಿದೆ.
ಆರೋಪಿಗಳನ್ನು ಬಂಧಿಸುವವರೆಗೂ ಶವ ಕೊಂಡೊಯ್ಯಲು ಅವಕಾಶ ನೀಡುವುದಿಲ್ಲ ಎಂದು ಹಠ ಹಿಡಿದ ಕುಟುಂಬಸ್ಥರಿಗೆ ಪೊಲೀಸ್ ಅಧಿಕಾರಿಗಳ ತಂಡವು ಮನವೊಲಿಕೆ ಮಾಡಿದೆ. ಮರಣೋತ್ತರ ಪರೀಕ್ಷೆ ವಿಳಂಬವಾದರೆ ಪ್ರಮುಖ ಸಾಕ್ಷ್ಯಗಳನ್ನು ದುರ್ಬಲಗೊಳಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ಮನವರಿಕೆ ಮಾಡಿಕೊಟ್ಟಿದ್ದಾರೆ.
ಪೊಲೀಸರು ಆರೋಪಿಗಳನ್ನು ಬಂಧಿಸುವುದಾಗಿ ಭರವಸೆ ಕೊಟ್ಟ ಹಿನ್ನೆಲೆಯಲ್ಲಿ ಮರಣೋತ್ತರ ಪರೀಕ್ಷೆ ಬಳಿಕ ಸಂತೋಷ್ ಪಾಟೀಲ್ ಮೃತದೇಹವನ್ನು ಮಣಿಪಾಲ ಫಾರೆನ್ಸಿಕ್ ಮೆಡಿಸಿನ್ ವಿಭಾಗದಲ್ಲಿ ಹಸ್ತಾಂತರ ಮಾಡಲಾಯಿತು. ಬಳಿಕ ಹವಾನಿಯಂತ್ರಿತ ಅಂಬುಲೆನ್ಸ್ ನಲ್ಲಿ ಮೃತದೇಹವನ್ನು ಬೆಳಗಾವಿಯ ಬಡಸ ಗ್ರಾಮಕ್ಕೆ ರವಾನೆ ಮಾಡಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1duNIQRfXnJcfQKWPzNqD
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka
ಇನ್ನಷ್ಟು ಸುದ್ದಿಗಳು
ಅಂಬೇಡ್ಕರ್ ಜಯಂತಿ ಶುಭಾಶಯ ಕೋರಿದ ಪ್ರಧಾನಿ, ಸಿಎಂ, ಮಾಜಿ ಸಿಎಂಗಳು
ನಿಂಬೆ ಹಣ್ಣಿನ ಬೆಲೆ ದಿಡೀರ್ ಏರಿಕೆ :100 ಕೆ.ಜಿಗೂ ಅಧಿಕ ನಿಂಬೆಹಣ್ಣು ಕಳವು
ಸಿಎಂ ಬೊಮ್ಮಾಯಿ ಕಾರಿಗೆ ಎಸ್ ಡಿಪಿಐ ಕಾರ್ಯಕರ್ತರಿಂದ ಕಪ್ಪು ಬಾವುಟ ಪ್ರರ್ದಶನ
ಈಶ್ವರಪ್ಪನವರ ಬೆವರಿಳಿಸಿದ ಫೋನ್ ಕರೆ: ಗಾಬರಿಯಿಂದ ಬೆಂಗಳೂರಿಗೆ ತೆರಳಿದ ಈಶ್ವರಪ್ಪ