ಶಾಸಕ ದಂಪತಿಗೆ ಹೂವಿನ ಮಳೆ ಸುರಿಸಿದ ಪೊಲೀಸ್ ಅಧಿಕಾರಿಗಳ ವಿರುದ್ಧ ನೋಟಿಸ್!
ಬೆಳಗಾವಿ: ಕಿತ್ತೂರು ಬಿಜೆಪಿ ಶಾಸಕ ಮಹಾಂತೇಶ್ ದೊಡ್ಡಗೌಡರ್ ಅವರ ಹುಟ್ಟುಹಬ್ಬ ಆಚರಣೆಯ ಸಂದರ್ಭದಲ್ಲಿ ಶಾಸಕ ಮಹಾಂತೇಶ್ ದೊಡ್ಡಗೌಡರ್ ಮತ್ತು ಅವರ ಪತ್ನಿಯನ್ನು ಕುರಿಸಿ, ಪೊಲೀಸ್ ಅಧಿಕಾರಿಗಳು ಹೂವಿನ ಮಳೆ ಸುರಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಬೈಲಹೊಂಗಲ ಡಿವೈಎಸ್ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಠಾಣೆ ಪಿಎಸ್ ಐ ವೈ.ಎಸ್.ಶೀಗಿಹಳ್ಳಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
ಶಾಸಕ ಮಹಾಂತೇಶ್ ದೊಡ್ಡಗೌಡರ್ ಮತ್ತು ಅವರ ಪತ್ನಿಯನ್ನು ಕುರಿಸಿ, ಪೊಲೀಸ್ ಅಧಿಕಾರಿಗಳು ಹೂವಿನ ಮಳೆ ಸುರಿದಿರುವುದು ರಾಜ್ಯ ಪೊಲೀಸ್ ಇಲಾಖೆಗೆ ಮುಜುಗರ ತಂದಿದೆ. ಪೊಲೀಸರು ಈ ಮಟ್ಟಕ್ಕೆ ಇಳಿಯಬಾರದಿತ್ತು ಎನ್ನುವ ಅಭಿಪ್ರಾಯಗಳು ಕೇಳಿ ಬಂದಿತ್ತು.
ಬೈಲಹೊಂಗಲ ಡಿಎಸ್ ಪಿ ಶಿವಾನಂದ ಕಟಗಿ, ಸಿಪಿಐ ಸಾತೇನಹಳ್ಳಿ, ನೇಸರಗಿ ಪೊಲೀಸ್ ಠಾಣೆ ಪಿಎಸ್ ಐ ಶೀಗಿಹಳ್ಳಿ, ಎಸ್ ಐ ವಿಶ್ವನಾಥ್ ಮಲ್ಲನ್ನವರ್, ಪೇದೆಗಳು ಮತ್ತು ಚಾಲಕರು ಶಾಸಕ ಮಹಾಂತೇಶ್ ದೊಡ್ಡಗೌಡರ್ ಹುಟ್ಟುಹಬ್ಬದಲ್ಲಿ ಭಾಗಿಯಾಗಿದ್ದಾರೆನ್ನಲಾಗಿತ್ತು. ಈ ಸಂಬಂಧ ಮಾಧ್ಯಮಗಳಲ್ಲಿ ವಿಡಿಯೋಗಳು ಪ್ರಸಾರವಾಗುತ್ತಿದ್ದಂತೆ ವ್ಯಾಪಕ ವಿರೋಧ ವ್ಯಕ್ತವಾಗಿತ್ತು.
ಇನ್ನಷ್ಟು ಸುದ್ದಿಗಳು…
ಬೈಕು, ಟಿವಿ, ಫ್ರಿಡ್ಜ್ ಹೊಂದಿದವರ ಪಡಿತರ ಚೀಟಿ ರದ್ದಾಗುವುದೇ? | ಕೊನೆಗೂ ಸ್ಪಷ್ಟನೆ ನೀಡಿದ ಇಲಾಖೆ
ನಿಮ್ಮ ಜೀವ ನಿಮ್ಮ ರಕ್ಷಣೆ ಎಂಬುದನ್ನು ಮರೆಯಬೇಡಿ | ಸಿಎಂ ಬಸವರಾಜ್ ಬೊಮ್ಮಾಯಿ
ಪೊಲೀಸ್ ಠಾಣೆಯ ಮುಂಭಾಗದಲ್ಲಿಯೇ ಯುವಕನ ಮೇಲೆ 6 ಮಂದಿಯಿಂದ ಹಲ್ಲೆ!
ಹುಡುಗಿಯರನ್ನು ಚುಡಾಯಿಸಿದ್ದಕ್ಕೆ ಸಾರಿಗೆ ಬಸ್ ನಲ್ಲಿಯೇ ಯುವಕನಿಗೆ ಹಿಗ್ಗಾಮುಗ್ಗಾ ಹಲ್ಲೆ!
ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಆತುರ ನನಗಿಲ್ಲ, 2023ರ ಚುನಾವಣೆಗಾಗಿ ಕಾಯುತ್ತಿದ್ದೇನೆ | ಬಿ.ವೈ.ವಿಜಯೇಂದ್ರ