ವಾಕಿಂಗ್ ಮಾಡುತ್ತಿದ್ದ ವೇಳೆ ನಡೀತು ಅವಘಡ: ಯಮನಾಗಿ ಬಂದ ಕಾರು ಡಿಕ್ಕಿಯಾಗಿ ಅಮ್ಮ, ಮಗಳು ಸಾವು
ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಮಹಿಳೆ ಮತ್ತು ಆಕೆಯ ಮಗಳಿಗೆ ಹಿಂದಿನಿಂದ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಅವರಿಬ್ಬರು ಸಾವನ್ನಪ್ಪಿದ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ. ನರಸಿಂಗಿ ಪೊಲೀಸ್ ಠಾಣೆ ವ್ಯಾಪ್ತಿಯ ಮುಖ್ಯ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಿಸಿಟಿವಿ ಕ್ಯಾಮೆರಾಗಳಲ್ಲಿ ಸೆರೆಯಾಗಿದೆ.
ಇವರು ನಡೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮಹಿಳೆ ಮತ್ತು ಆಕೆಯ ಮಗಳು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ಮತ್ತೋರ್ವ ಮಹಿಳೆ ಗಾಯಗೊಂಡಿದ್ದಾರೆ ಎಂದು ನರಸಿಂಗಿ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಗಾಯಗೊಂಡ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿ ತಿಳಿಸಿದ್ದಾರೆ. ಘಟನೆಯ ನಂತರ ಕಾರು ಚಾಲಕ ವಾಹನವನ್ನು ಬಿಟ್ಟು ಸ್ಥಳದಿಂದ ಪರಾರಿಯಾಗಿದ್ದಾನೆ. ಚಾಲಕನನ್ನು ಬಂಧಿಸಲು ಶೋಧ ನಡೆಯುತ್ತಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw