ಬಿಗ್ ಬ್ರೇಕಿಂಗ್ ನ್ಯೂಸ್: ಹೈದರಾಬಾದ್ ಅತ್ಯಾಚಾರ ಪ್ರಕರಣದ ಆರೋಪಿ ಆತ್ಮಹತ್ಯೆ
ಹೈದರಾಬಾದ್: 6 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ ಹತ್ಯೆ ಮಾಡಿದ್ದ ಆರೋಪಿಯ ಮೃತದೇಹ ರೈಲ್ವೆ ಹಳಿಯ ಮೇಲೆ ಪತ್ತೆಯಾಗಿದ್ದು, ಆರೋಪಿಯು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಕ್ಕಳ ಲೈಂಗಿಕ ಕಿರುಕುಳದ ಆರೋಪಿ ಪಲ್ಲಕೊಂಡ ರಾಜು ಆತ್ಮಹತ್ಯೆಗೆ ಶರಣಾಗಿರುವವನಾಗಿದ್ದಾನೆ. ನೆರೆಯ ಮನೆಯ ಬಾಲಕಿಗೆ ಚಾಕೊಲೇಟ್ ಕೊಡುವ ನೆಪದಲ್ಲಿ ಕರೆದೊಯ್ದು ಅತ್ಯಾಚಾರ ನಡೆಸಿದ್ದ. ಭಾನುವಾರ ಆರೋಪಿಯ ಮನೆಯಲ್ಲಿ ಬಾಲಕಿಯ ಮೃತದೇಹ ಪತ್ತೆಯಾಗಿತ್ತು.
ತೆಲಂಗಾಣ ಸಚಿವ ಮಲ್ಲಾ ರೆಡ್ಡಿ ಅವರು, ಅತ್ಯಾಚಾರ ಆರೋಪಿಯನ್ನು ಎನ್ ಕೌಂಟರ್ ಮಾಡುತ್ತೇವೆ ಎಂದು ಹೇಳಿಕೆ ನೀಡಿದ ಎರಡೇ ದಿನದಲ್ಲಿ ಆರೋಪಿಯ ಮೃತದೇಹ ಪತ್ತೆಯಾಗಿದ್ದು, ಮೇಲ್ನೋಟಕ್ಕೆ ಇದು ಆತ್ಮಹತ್ಯೆಯಂತೆ ತೋರುತ್ತಿದೆ ಎಂದು ಪೊಲೀಸರು ಹೇಳುತ್ತಿದ್ದಾರೆ.
ಆರೋಪಿಯ ಮೃತದೇಹ ಛಿದ್ರಛಿದ್ರಗೊಂಡಿದ್ದು, ದೇಹದಲ್ಲಿ ಅತ್ಯಾಚಾರಿ ಆರೋಪಿಯ ದೇಹದಲ್ಲಿದ್ದಂತಹ ಟ್ಯಾಟೋಗಳು, ಬರೆದಿರುವ ಹೆಸರುಗಳು ಪತ್ತೆಯಾಗಿದ್ದು, ಹೀಗಾಗಿ ಇದು ಆರೋಪಿ ಪಲ್ಲಕೊಂಡ ರಾಜುವಿನ ಮೃತದೇಹವಾಗಿದೆ ಎಂದು ಪೊಲೀಸರು ಗುರುತಿಸಿದ್ದಾರೆ.
6 ವರ್ಷದ ಮಗುವಿನ ಅತ್ಯಾಚಾರ, ಕೊಲೆ ಪ್ರಕರಣ ಇಡೀ ದೇಶದಲ್ಲಿಯೇ ಆಕ್ರೋಶವನ್ನುಂಟು ಮಾಡಿತ್ತು. ಘಟನೆ ನಡೆದು ಹಲವು ದಿನಗಳಾಗಿದ್ದರೂ ಪೊಲೀಸರಿಗೆ ಆರೋಪಿಯನ್ನು ಬಂಧಿಸಲು ಸಾಧ್ಯವಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಆರೋಪಿಯನ್ನು ಹಿಡಿದುಕೊಟ್ಟವರಿಗೆ 10 ಲಕ್ಷ ರೂಪಾಯಿ ಬಹುಮಾನವನ್ನು ಕೂಡ ಘೋಷಿಸಲಾಗಿತ್ತು. ಇದೀಗ ಅಂತಿಮವಾಗಿ ಆರೋಪಿಯು ರೈಲು ಹಳಿಯಲ್ಲಿ ಮಲಗಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ಇನ್ನಷ್ಟು ಸುದ್ದಿಗಳು…
ಮಕ್ಕಳಿಗೆ ಎರಡು ದಿನಗಳಿಗಿಂತ ಹೆಚ್ಚುಕಾಲ ಕೊವಿಡ್ ಲಕ್ಷಣಗಳಿದ್ದರೆ ತಪ್ಪದೇ ಪರೀಕ್ಷೆ ನಡೆಸಿ
4.3 ಕೋಟಿ ವರ್ಷಗಳ ಹಿಂದಿನ ನಾಲ್ಕು ಕಾಲಿನ ಬೃಹತ್ ತಿಮಿಂಗಲ ಪತ್ತೆ!
ಹೃದಯ ವಿದ್ರಾವಕ ಘಟನೆ: ಹುಟ್ಟುಹಬ್ಬದಂದೇ ವಿದ್ಯುತ್ ಸ್ಪರ್ಶಿಸಿ ಮೃತಪಟ್ಟ ಮಗು
ಕಬಡ್ಡಿ ತರಬೇತಿ ಕೇಂದ್ರದಲ್ಲಿ ತಂದೆ, ಮಗನಿಂದ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ!
ಜನರ ಭಾವನೆಗಳನ್ನು ಕೆಡವಿದವರು ಈಗ ದೇವಸ್ಥಾನವನ್ನೂ ಕೆಡವಿದ್ದಾರೆ | ಯು.ಟಿ.ಖಾದರ್ ಆಕ್ರೋಶ
ತೆನೆಇಳಿಸಿ ಕೈ ಹಿಡಿಯುತ್ತಾರಾ ಜೆಡಿಎಸ್ ನ ಮತ್ತೋರ್ವ ಶಾಸಕ?
ಕಲಾಪದ ವೇಳೆ ಕೊನೆಯ ಸೀಟಿನಲ್ಲಿ ಕುಳಿತು ಮೌನಕ್ಕೆ ಜಾರಿದ ಮಾಜಿ ಸಿಎಂ ಯಡಿಯೂರಪ್ಪ