ಕುಟುಂಬ ಸಹಿತ ಪ್ರಯಾಣಿಸುತ್ತಿದ್ದ ಐಎಎಸ್ ಅಧಿಕಾರಿಯ ಕಾರು ಪಲ್ಟಿ

ias officer
19/04/2022

ವಿಜಯಪುರ: ಅಧಿಕಾರ ವಹಿಸಿಕೊಳ್ಳಲು ವಿಜಯಪುರಕ್ಕೆ ಕುಟುಂಬ ಸಮೇತ ಹೊರಟಿದ್ದ ಐಎಎಸ್ ಅಧಿಕಾರಿಯಿದ್ದ ಕಾರೊಂದು ಪಲ್ಟಿಯಾದ ಘಟನೆ ಧಾರವಾಡ ತಾಲೂಕಿನ ಯರಿಕೊಪ್ಪ ಗ್ರಾಮದ ಬಳಿ‌ ಇಂದು ನಡೆದಿದೆ.

ಐಎಎಸ್ ಅಧಿಕಾರಿ ವಿಜಯಮಹಾಂತೇಶ ದಾನಮ್ಮನವರ, ಪತ್ನಿ ಶ್ವೇತಾ, ಮಕ್ಕಳಾದ ತನ್ವಿ, ವಿಹಾನ್ ಹಾಗೂ ಪ್ರವಿಣ ಕುಮಾರ ಕಾರಿನಲ್ಲಿದ್ದರು. ಮುಂಜಾನೆ 5 :30ಕ್ಕೆ ಘಟನೆ ನಡೆದಿದ್ದು, ಅವಘಾತದಲ್ಲಿ ಜಿಲ್ಲಾಧಿಕಾರಿ ವಿಜಯಮಹಾಂತೇಶ ದಾನಮ್ಮನವರು ಸೇರಿದಂತೆ ಪತ್ನಿ ಹಾಗೂ ಮಕ್ಕಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ತಿಳಿದು ಬಂದಿದೆ. ಕೂಡಲೇ ಅವರನ್ನು ಎಸ್ ಡಿ ಎಂ ಕಾಲೇಜು ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.

ದಾವಣಗೆರೆ ಜಿಲ್ಲಾ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಯಾಗಿದ್ದ ವಿಜಯಮಹಾಂತೇಶ ದಾನಮ್ಮನವರ ಅವರ ವರ್ಗಾವಣೆ ಆದೇಶ ನಿನ್ನೆಯಷ್ಟೇ ಬಂದಿತ್ತು. ಹಾಗಾಗಿ, ವಿಜಯಪುರ ಜಿಲ್ಲಾಧಿಕಾರಿಯಾಗಲು ಹೊರಟಿದ್ದರು. ಈ ವೇಳೆ ಮಾರ್ಗ ಮಧ್ಯೆ ದುರ್ಘಟನೆ ನಡೆದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ https://chat.whatsapp.com/FZkISFWKknBDvdYkMVFArW

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ಸಂತೋಷ್ ಆತ್ಮಹತ್ಯೆ ಮಾಡಿಕೊಂಡಿದ್ದ ಲಾಡ್ಜ್ ನಲ್ಲಿ ಮತ್ತೋರ್ವ ಯುವಕ ಆತ್ಮಹತ್ಯೆ!

ಅಂಬೇಡ್ಕರ್ ವಿಚಾರಧಾರೆ ಮಾತನಾಡಿದ್ದಕ್ಕೆ ವಿದ್ಯಾರ್ಥಿಗೆ ಬೆದರಿಕೆ: ಶಿಕ್ಷಕ ಅಮಾನತು

ಪತಿ ಅಪಘಾತದಲ್ಲಿ ಸಾವು: ಪುತ್ರನನ್ನು ಕೊಂದು ಆತ್ಮಹತ್ಯೆಗೆ ಶರಣಾದ ಪತ್ನಿ

ಕಸದ ಲಾರಿಗೆ ಮತ್ತೊಂದು ಬಲಿ:  ಬೈಕ್ ನಲ್ಲಿ ಹೋಗುತ್ತಿದ್ದ ಮಹಿಳೆಯ ದಾರುಣ ಸಾವು

ಮಠಗಳಿಂದ ಕಮಿಷನ್ ವಸೂಲಿ: ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

 

ಇತ್ತೀಚಿನ ಸುದ್ದಿ

Exit mobile version