RSS ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ: ಎಲ್ಲದಕ್ಕೂ ಸ್ಪಷ್ಟನೆ ನೀಡಿದ ನಾಗತಿಹಳ್ಳಿ ಚಂದ್ರಶೇಖರ್
ಬೆಂಗಳೂರು: ಧರ್ಮ ಸಾಮರಸ್ಯದ ಪರ, ದ್ವೇಷ ರಾಜಕಾರಣದ ವಿರೋಧಿಯಾಗಿ ಗುರುತಿಸಿಕೊಂಡಿರುವ ನಾಗತಿಹಳ್ಳಿ ಚಂದ್ರಶೇಖರ್, ಧರ್ಮ ದ್ವೇಷದ ಮೂಲ ಎಂದು ಆರೋಪಿಸಲಾಗುವ ಆರ್ ಎಸ್ ಎಸ್ ನ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿರುವ ಬಗ್ಗೆ ಹಲವರು ಆಕ್ಷೇಪಣೆ ವ್ಯಕ್ತಪಡಿಸಿದ್ದರು. ಕೆಲವರಂತೂ ನಾಗತಿಹಳ್ಳಿಯವರು ‘ಒಳ ಬಲಪಂಥೀಯ’ ಎಂದು ಟೀಕಿಸಿದ್ದು, ಈ ಎಲ್ಲದಕ್ಕೂ ನಾಗತಿಹಳ್ಳಿ ಸ್ಪಷ್ಟನೆ ನೀಡಿದ್ದಾರೆ.
ಟೀಕಿಸಿದವರ ಬಗ್ಗೆ ”ತಪ್ಪು ತಿಳಿಯಲು, ತಪ್ಪು ಹರಡಲು ತುದಿಗಾಲಲ್ಲಿ ನಿಂತವರನ್ನು, ನಿತ್ಯ ಹೊಸ, ಹುಸಿ ರೋಮಾಂಚನ ಬಯಸುವ ಮಹನೀಯರನ್ನು ಮನ್ನಿಸಿ ಮುಂದೆ ಹೋಗೋಣ. ಇಲ್ಲಿ ನಾವೆಲ್ಲ ಮಾಡಲೇಬೇಕಾದ ಜನಪರ ಕೆಲಸಗಳು ಬಹಳಷ್ಟಿವೆ. ಮಾಡೋಣ. ಇನ್ನು ಮಾತು ಸಾಕು” ಎಂದಿದ್ದಾರೆ
ಈ (ಆರ್ ಎಸ್ ಎಸ್) ಸಮಾರಂಭದಲ್ಲಿ ನಾನು ಭಾಗವಹಿಸುತ್ತಿಲ್ಲ. ಅದನ್ನು ನಾನು ಸ್ಪಷ್ಟಪಡಿಸಿಯೂ ಆಮಂತ್ರಣದಲ್ಲಿ ನನ್ನ ಹೆಸರು ಅಚ್ಚಾಗಿದೆ. ಅದು ‘ಆಕಸ್ಮಿಕ’ಎಂದು ಅವರು ಕ್ಷಮೆ ಯಾಚಿಸಿದ್ದಾರೆ. ಅಲ್ಲಿಗೆ ವಿಷಯ ಮುಕ್ತಾಯಗೊಂಡಿದೆ.
ಆ ದಿನಾಂಕದಂದು ನಾನು ದೂರದ ದೇಶದಲ್ಲಿ ಚಿತ್ರೀಕರಣದಲ್ಲಿರುವುದು ನನ್ನನ್ನು ಬಲ್ಲವರಿಗೆಲ್ಲ ತಿಳಿದಿದೆ. ನನ್ನನ್ನು ಅತ್ಯಂತ ಹತ್ತಿರದಿಂದ ಬಲ್ಲ, ನನ್ನನ್ನು ನಂಬುವ,ನನ್ನನ್ನು ಪ್ರೀತಿಸುವ, ನನ್ನನ್ನು ಬೆಳೆಸಿರುವ, ನನ್ನೊಂದಿಗೆ ಹಳ್ಳಿಯ ಕೆಲಸದಲ್ಲಿ ಕೈಜೋಡಿಸಿರುವ ಅಕ್ಕರೆಯ ಎಲ್ಲ ಮನಸ್ಸುಗಳಿಗೆ ಹೇಳುವ ಒಂದು ಮಾತು: ನಾನು ಏನಾಗಿದ್ದೀನೋ ಅದೇ ಆಗಿ ಇರುತ್ತೇನೆ. ನಾನು ಏನು ಮಾಡುತ್ತಿದ್ದೀನೋ ಅದು ಸರಿ ಇದೆ. ಅದನ್ನೇ ಮುಂದುವರೆಸುತ್ತೇನೆ” ಎಂದಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw