ನನ್ನ ಹತ್ಯೆಗೆ ಅಶ್ವತ್ಥ್ ನಾರಾಯಣ್ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ: ಸಿದ್ದರಾಮಯ್ಯ - Mahanayaka
7:02 PM Friday 20 - September 2024

ನನ್ನ ಹತ್ಯೆಗೆ ಅಶ್ವತ್ಥ್ ನಾರಾಯಣ್ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ: ಸಿದ್ದರಾಮಯ್ಯ

siddaramaiha
16/02/2023

ಬೆಂಗಳೂರು: ಟಿಪ್ಪುವನ್ನು ಹೊಡೆದುಹಾಕಿದಂತೆ ನನ್ನನ್ನೂ ಹೊಡೆದುಹಾಕಬೇಕು ಎಂದು ಸಚಿವ ಅಶ್ವತ್ಥ್ ನಾರಾಯಣ್ ಜನರಿಗೆ ಕರೆನೀಡಿದ್ದಾರೆ. ಜನರನ್ನು ಯಾಕೆ ಪ್ರಚೋದಿಸುತ್ತೀರಿ ಸಚಿವರೇ? ನೀವೇ ಕೋವಿ ಹಿಡಿದುಕೊಂಡು ಬಂದು ಬಿಡಿ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವ ಅಶ್ವತ್ಥ ನಾರಾಯಣ್ ಹೇಳಿಕೆ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ನನ್ನ ಹತ್ಯೆಗೆ ಅಶ್ವತ್ಥ್ ನಾರಾಯಣ್ ಅವರು ಕೊಟ್ಟ ಕರೆಯಿಂದ ನನಗೇನು ಆಶ್ಚರ್ಯವಾಗಿಲ್ಲ. ಗಾಂಧೀಜಿಯನ್ನು ಕೊಂದವರನ್ನೇ ಆರಾಧಿಸುತ್ತಿರುವ ಪಕ್ಷದ ನಾಯಕರಿಂದ ಕೊಲೆಗಡುಕತನವಲ್ಲದೆ, ಪ್ರೀತಿ, ಕರುಣೆ, ಸ್ನೇಹವನ್ನು ನಿರೀಕ್ಷಿಸಲು ಸಾಧ್ಯವೇ? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಒಬ್ಬ ಸಚಿವ ಈ ರೀತಿ ಬಹಿರಂಗವಾಗಿ ಹತ್ಯೆಗೆ ಕರೆ ನೀಡಿದ ನಂತರವೂ ಅವರ ವಿರುದ್ಧ ಪೊಲೀಸರು ಕ್ರಮಕೈಗೊಂಡಿಲ್ಲ ಎಂದಾದರೆ ಈ ರಾಜ್ಯವನ್ನು ಆಳುವವರು ಜೀವಂತವಾಗಿಲ್ಲ, ಸರ್ಕಾರ ಸತ್ತುಹೋಗಿದೆ ಎಂದೇ ಲೆಕ್ಕ ಎಂದು ಸಿದ್ದರಾಮಯ್ಯ ಅವರು ಟ್ವೀಟ್ ಮೂಲಕ ಹೇಳಿದ್ದಾರೆ.
ಸಚಿವ ಅಶ್ವತ್ಥ್ ನಾರಾಯಣ್ ಅವರು ನೀಡಿರುವ ಹತ್ಯೆಯ ಕರೆಯ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಪ್ರತಿಕ್ರಿಯೆ ಏನು ಎನ್ನುವುದನ್ನು ನಾನು ತಿಳಿದುಕೊಳ್ಳಬಯಸುತ್ತೇನೆ. ಮೌನ ಸಮ್ಮತಿಯ ಲಕ್ಷಣವೇ? ಎಂದು ಪ್ರಶ್ನಿಸಿದ್ದಾರೆ.


Provided by

ಮಂಡ್ಯದಲ್ಲಿ ಸಚಿವ ಅಶ್ವತ್ಥ್ ನಾರಾಯಣ್ ಅವರು ಸಿದ್ದರಾಮಯ್ಯ ಅವರನ್ನು ಟಿಪ್ಪು ಸುಲ್ತಾನ್ ರೀತಿ ಹೊಡೆದು ಹಾಕಬೇಕು ಎಂದು ಹೇಳಿದ್ದಾರೆ. ನೀವೆಲ್ಲ ನನ್ನನ್ನು ಹೊಡೆದುಹಾಕಲು ಬಿಡುತ್ತೀರ? ನಾನು ಟಿಪ್ಪು ಸುಲ್ತಾನ್, ಸಂಗೊಳ್ಳಿ ರಾಯಣ್ಣ, ಸಂತ ಸೇವಾಲಾಲ್, ಬಸವಣ್ಣ, ಕನಕದಾಸರು ಈ ಎಲ್ಲರನ್ನೂ ಗೌರವಿಸುತ್ತೇನೆ. ಹಿಂದೂ, ಮುಸ್ಲಿಂ, ಕ್ರಿಶ್ಚಿಯನ್ ಹೀಗೆ ಎಲ್ಲಾ ಧರ್ಮದವರನ್ನು ಸಮಾನವಾಗಿ ಕಾಣುತ್ತೇನೆ. ಎಲ್ಲ ಜನರನ್ನು ಪ್ರೀತಿ ಮಾಡುತ್ತೇನೆ. ಬಿಜೆಪಿಯವರು ಸಮಾಜದಲ್ಲಿ ದ್ವೇಷ ಹುಟ್ಟುಹಾಕುವವರು, ದಯವಿಟ್ಟು ಇಂಥಾ ಸ್ವಾರ್ಥಿಗಳಿಗೆ ನಿಮ್ಮ ಮತ ನೀಡಬೇಡಿ ಬಾಗಲಕೋಟೆ ಜನತೆಗೆ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg

ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w

ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw

ಇತ್ತೀಚಿನ ಸುದ್ದಿ