ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ: ದುನಿಯಾ ವಿಜಯ್ ಟ್ವೀಟ್

ಸೌಜನ್ಯ ಅತ್ಯಾಚಾರ ಬರ್ಬರ ಹತ್ಯೆ ಪ್ರಕರಣದ ಮರುತನಿಖೆಗೆ ವ್ಯಾಪಕ ಒತ್ತಾಯ ಕೇಳಿ ಬರುತ್ತಿದೆ. ರಾಜ್ಯದಾದ್ಯಂತ ಸಾಕಷ್ಟು ಜನರು ಸೌಜನ್ಯ ಪ್ರಕರಣದ ಮರುತನಿಖೆಗೆ ಒತ್ತಾಯಿಸುತ್ತಿದ್ದಾರೆ. ಇದೇ ವೇಳೆ ನಟ ದುನಿಯಾ ವಿಜಯ್ ಅವರು ಸೌಜನ್ಯ ವಿಚಾರವಾಗಿ ಮಾಡಿರುವ ಟ್ವೀಟ್ ಗಮನ ಸೆಳೆದಿದೆ.
ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ಬಗ್ಗೆ ಬರೆದುಕೊಂಡಿರುವ ದುನಿಯಾ ವಿಜಯ್, ಪ್ರತಿ ವರ್ಷ ಧರ್ಮಸ್ಥಳದ ದರ್ಶನ ಪಡೆಯುವುದು ವಾಡಿಕೆಯಾಗಿತ್ತು, ಆದರೆ ಸೌಜನ್ಯಳ ಪ್ರಕರಣದ ಇಂದಿನ ಬೆಳವಣಿಗೆ ನೋಡಿ ಸೌಜನ್ಯ ಮತ್ತು ಕುಟುಂಬಸ್ಥರಿಗೆ ನ್ಯಾಯ ಸಿಗುವವರೆಗೂ ಮಂಜುನಾಥನ ದರ್ಶನ ಮಾಡಕೂಡದು ಅನಿಸುತ್ತಿದೆ ಎಂದಿದ್ದಾರೆ.
ಇದೇ ಟ್ವೀಟ್ ನ ಕೊನೆಯ ಸಾಲಿನಲ್ಲಿ ಸತ್ಯ ಎಂಬುದು ಸೂರ್ಯನ ಬೆಳಕಿದಂತೆ ಯಾರು ಹೆಚ್ಚು ಸಮಯ ಮರೆಮಾಚಲಾಗದು ಎಂದು ಬುದ್ಧರ ವಾಕ್ಯವನ್ನೂ ಅವರು ಉಲ್ಲೇಖಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ74835 51849 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw