ರಾಜ್ಯದಲ್ಲಿ 3 ಲೋಕಸಭಾ ಕ್ಷೇತ್ರಗಳನ್ನು ಗೆಲ್ಲಿಸಿಕೊಡುವುದಾಗಿ ಹೇಳಿದ್ದೇನೆ : ವಿ. ಸೋಮಣ್ಣ

v somanna
14/01/2024

ಹೈಕಮಾಂಡ್ ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ರಾಜ್ಯಸಭಾ ಸ್ಥಾನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದೇನೆ. ರಾಜ್ಯದಲ್ಲಿ 3 ಲೋಕಸಭಾ ಕ್ಷೇತ್ರ ಗೆಲ್ಲಿಸಿಕೊಡುವುದಾಗಿ ಹೇಳಿದ್ದೇನೆ ಎಂದು ಮಾಜಿ ಸಚಿವ ವಿ.ಸೋಮಣ್ಣ ತಿಳಿಸಿದರು.

ಮಾಜಿ ಸಚಿವ, ಬಿಜೆಪಿ ಹಿರಿಯ ನಾಯಕ ವಿ.ಸೋಮಣ್ಣ ಅವರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಉಭಯ ನಾಯಕರ ನಡುವೆ ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಯಿತು.

ಭೇಟಿ ಬಳಿ ಮಾಧ್ಯಮಗಳ ಜೊತೆ ಮಾತನಾಡಿದ ವಿ.ಸೋಮಣ್ಣ, ಪಕ್ಷದ ಮುಖ್ಯವಾಹಿನಿಯಲ್ಲಿ ಇರುವಂತೆ ಹೈಕಮಾಂಡ್ ನಾಯಕರು ಸೂಚಿಸಿದ್ದಾರೆ. ಅಮಿತ್ ಶಾ, ಜೆ.ಪಿ.ನಡ್ಡಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದೇನೆ. ಕೆಲವೊಂದು ಪ್ರಮುಖ ವಿಚಾರಗಳನ್ನು ನಾನು ಚರ್ಚೆ ಮಾಡಿದ್ದೇನೆ. ಮಾತುಕತೆಯ ಎಲ್ಲಾ ವಿವರಗಳನ್ನು ಈಗ ಬಹಿರಂಗವಾಗಿ ಹೇಳಲಾಗದು. ಅಮಿತ್ ಶಾ ಭೇಟಿ ಬಹಳ ಸಮಾಧಾನ ತಂದಿದೆ ಎಂದು ತಿಳಿಸಿದರು.

 

ಇತ್ತೀಚಿನ ಸುದ್ದಿ

Exit mobile version