ನಾನು ಮಾಂಸ ತಿನ್ನುವ ಜಾತಿಯಲ್ಲೇ ಹುಟ್ಟಿದ್ದು: ಮೀನು ಸೇವಿಸಿ ದೇವರ ದರ್ಶನ ವಿಚಾರಕ್ಕೆ ಸಿ.ಟಿ.ರವಿ ಪ್ರತಿಕ್ರಿಯೆ

ಉತ್ತರಕನ್ನಡ ಜಿಲ್ಲೆ ಪ್ರವಾಸದ ವೇಳೆ ಸಿ.ಟಿ.ರವಿ ಮೀನೂಟ ಸೇವಿಸಿ ದೇವರ ದರ್ಶನ ಪಡೆದಿರುವ ವಿಚಾರ ಇದೀಗ ಚರ್ಚೆಯಾಗುತ್ತಿದ್ದು, ಈ ಸಂಬಂಧ ಇದೀಗ ಸಿ.ಟಿ.ರವಿ ಸ್ಪಷ್ಟನೆ ನೀಡಿದ್ದಾರೆ.
ನಾನು ಹುಟ್ಟಿರೋದೇ ಮಾಂಸ ತಿನ್ನುವ ಜಾತಿಯಲ್ಲಿ ಆದರೆ ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಭಟ್ಕಳಕ್ಕೆ ಹೋಗಿದ್ದಾಗ ನಾಗ ಬನ ನೋಡಲು ಕರೆದಿದ್ದರು. ಹೊಸದಾಗಿ ದೇವಾಲಯ ಕಟ್ಟಲಾಗಿತ್ತು. 45 ದಿನಗಳು ಓಪನ್ ಇರಲಿಲ್ಲ. ನಾಗಬನದ ಹೊರಾವಣದಲ್ಲಿ ನಿಂತು ದರ್ಶನ ಪಡೆದಿದ್ದೇವೆ ಎಂದು ಅವರು ಘಟನೆಯನ್ನು ವಿವರಿಸಿದರು.
ಮಾಂಸ ತಿಂದು ದೇವಸ್ಥಾನಕ್ಕೆ ಹೋಗಿಲ್ಲ, ಸುಮ್ಮನೆ ವಿವಾದ ಹುಟ್ಟು ಹಾಕಲು ಕೆಲವರು ಹೀಗೆ ಮಾಡುತ್ತಿದ್ದಾರೆ. ವೃತ ಪೂಜೆಗಳನ್ನು ಆಚರಿಸುವವನು ನಾನು. ದೇವರ ಬಗ್ಗೆ ಶ್ರದ್ಧೆ ಇದೆ ಎಂದು ಅವರು ಹೇಳಿದರು.
ಉತ್ತರ ಕನ್ನಡ ಜಿಲ್ಲೆಯ ಪ್ರವಾಸ ವೇಳೆ ಭಟ್ಕಳದ ಶಿರಾಲಿಯಲ್ಲಿ ಶಾಸಕ ಸುನೀಲ್ ನಾಯ್ಕ್ ಮನೆಯಲ್ಲಿ ಸಿ.ಟಿ.ರವಿ ಮೀನೂಟ ಸವಿದು ಬಳಿಕ ದೇವರ ದರ್ಶನ ಮಾಡಿದ್ದರು. ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆದ ಬೆನ್ನಲ್ಲೇ ಸಿ.ಟಿ.ರವಿ ಈ ಸ್ಪಷ್ಟನೆ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/H1J7NYrbnAi7fQ7rqJsLYg
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw