ನಾಯಿಯಲ್ಲಿರುವ ನಿಯತ್ತನ್ನು ನನ್ನ ಜೀವನದಲ್ಲಿ ಅಳವಡಿಸಿಕೊಳ್ಳುತ್ತೇನೆ: ಸಿದ್ದರಾಮಯ್ಯಗೆ ಬೊಮ್ಮಾಯಿ ತಿರುಗೇಟು

ಬಳ್ಳಾರಿ: ಪ್ರಧಾನಿ ಮೋದಿಯವರ ಮುಂದೆ ಸಿಎಂ ಬಸವರಾಜ್ ಬೊಮ್ಮಾಯಿ ನಾಯಿಥರ ಮುದುಡಿಕೊಂಡಿರುತ್ತಾರೆ, ಅವರನ್ನು ಕಂಡರೆ ಭಯಪಡುತ್ತಾರೆ ಅನ್ನೋ ಸಿದ್ದರಾಮಯ್ಯ ಹೇಳಿಕೆಗೆ ಸಿಎಂ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.
ಬಳ್ಳಾರಿಯ ವಿಜಯನಗರ ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಜಿಂದಾಲ್ ಸಹಯೋಗದೊಂದಿಗೆ ಮಹಾವಿದ್ಯಾಲಯದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ 400 ಹಾಸಿಗೆಗಳ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದ ಬಳಿಕ ಮಾಧ್ಯಮಗಳ ಜೊತೆಗೆ ಸಿಎಂ ಮಾತನಾಡುತ್ತಿದ್ದರು.
ಸಿದ್ದರಾಮಯ್ಯನವರ ಮಾತುಗಳು ಅವರ ಅವಿವೇಕತನ, ಅವರ ಸಂಸ್ಕೃತಿ, ನಡವಳಿಕೆ, ವ್ಯಕ್ತಿತ್ವವನ್ನು ತೋರಿಸುತ್ತವೆ. ಪ್ರತಿಯಾಗಿ ನಾನು ಏನೂ ಹೇಳುವುದಿಲ್ಲ. ನಾಯಿ ಬಹಳ ನಿಯತ್ತಿನ ಪ್ರಾಣಿ, ಜನರಿಗೆ ಬಹಳ ನಿಯತ್ತಿನಿಂದ ಕೆಲಸ ಮಾಡುವ ವ್ಯಕ್ತಿ ನಾನು. ನಾಯಿಯಲ್ಲಿರುವ ನಿಯತ್ತನ್ನು ನನ್ನ ಜೀವನದಲ್ಲಿಯೂ ಅಳವಡಿಸಿಕೊಂಡು ಹೋಗುತ್ತೇನೆ ಎಂದು ಬೊಮ್ಮಾಯಿ ತಿರುಗೇಟು ನೀಡಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/LwWxa0YtfZe3V04Rgx7ZIV
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw