ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ನಾನು ಮುಕ್ತನಾಗುತ್ತೇನೆ, ಕಾಯಿರಿ: ಡಿ.ಕೆ.ಶಿವಕುಮಾರ್ ಹೇಳಿದ್ದೇನು?

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಸ್ಥಾನದಿಂದ ನಾನು ಮುಕ್ತನಾಗುತ್ತೇನೆ ಕಾಯಿರಿ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿಕೆ ನೀಡಿದ್ದು, ಈ ಹೇಳಿಕೆ ಇದೀಗ ಚರ್ಚೆಗೆ ಕಾರಣವಾಗಿದೆ.
ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಡಿಸಿಸಿ ಅಧ್ಯಕ್ಷರು, ಮುಂಚೂಣಿ ಘಟಕ ಹಾಗೂ ಸೆಲ್ ವಿಭಾಗಗಳ ಅಧ್ಯಕ್ಷರೊಂದಿಗೆ ಡಿಕೆಶಿ ಸಭೆ ನಡೆಸಿದರು. ಈ ಸಭೆಯಲ್ಲಿ ಡಿಕೆಶಿ ಯಾರೂ ಬೇಕಾದರೂ ಕೆಪಿಸಿಸಿ ಜವಾಬ್ದಾರಿ ತೆಗೆದುಕೊಳ್ಳಬಹುದು ಎಂದು ಹೇಳುವ ಮೂಲಕ ಪವರ್ ಶೇರ್ ಗೇಮ್ ಗೆ ಚಾಲನೆ ನೀಡಿದ್ದಾರೆ,
ಸಭೆಯಲ್ಲಿ ಕೆಪಿಸಿಸಿ ಪದಾಧಿಕಾರಿಯೊಬ್ಬರು ಜಿಲ್ಲಾ ಮಟ್ಟದಲ್ಲಿ ಎರಡು ಹುದ್ದೆಗಳ ಬಗ್ಗೆ ಪ್ರಸ್ತಾಪ ಮಾಡಿದರು. ಆಗ ಅಲ್ಲಿಯೇ ಇದ್ದ ಡಿಕೆಶಿ ತಕ್ಷಣವೇ, ನೋಡ್ರಪ್ಪ, ಸಮಯ, ಸಂದರ್ಭ ನೋಡಿಕೊಂಡು ನಮ್ ಪಾರ್ಟಿಯಲ್ಲಿ ಹಂಗೆ ಆಗುತ್ತೆ. ಖರ್ಗೆ ಸಾಹೇಬ್ರು ಎಐಸಿಸಿ ಅಧ್ಯಕ್ಷರು, ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿದ್ದಾರೆ. ನಾನು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ, ಎರಡು ಖಾತೆ ಕೂಡ ನಿರ್ವಹಿಸ್ತಿದ್ದೇನೆ ಎಂದು ತಿಳಿಸಿದರು.
100 ಕಾಂಗ್ರೆಸ್ ಕಚೇರಿಗಳ ಶಂಕುಸ್ಥಾಪನೆ ಬಳಿಕ ನಾನು ಮುಕ್ತನಾಗುತ್ತೇನೆ. ಬೇರೆಯವರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜವಾಬ್ದಾರಿ ವಹಿಸಿಕೊಳ್ಳಲಿ ಎಂದು ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: