ಕರ್ನಾಟಕ ಬಜೆಟ್ : ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ: ಸಿಎಂ ಸಿದ್ದರಾಮಯ್ಯ

Karnataka Budget- ಬೆಂಗಳೂರು: ಮಾರ್ಚ್ 3ರಿಂದ ವಿಧಾನಮಂಡಲ ಅಧಿವೇಶನ(Karnataka Legislative session) ಆರಂಭವಾಗಲಿದೆ, ಮಾರ್ಚ್ 7ರಂದು ಬಜೆಟ್ ಮಂಡನೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬಜೆಟ್ ಮಂಡನೆ ಹಿನ್ನೆಲೆ ಕರೆಯಲಾಗಿದ್ದ ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಮಾರ್ಚ್ 7ರಂದು ಬಜೆಟ್ ಮಂಡಿಸುತ್ತೇನೆ. ಬಳಿಕ 3 ದಿನ ರಾಜ್ಯ ಪಾಲರ ಭಾಷಣದ ಮೇಲೆ ಚರ್ಚೆಯಾಗುತ್ತದೆ ಎಂದು ಅವರು ತಿಳಿಸಿದರು.
ಬಜೆಟ್ ಸಂಬಂಧ ಈಗಾಗಲೇ ವಿವಿಧ ಇಲಾಖೆಯೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದು, ಇಲಾಖೆಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.
ಕರ್ನಾಟಕ ಸರ್ಕಾರ ರೈತರ ಹಿತ ಕಾಪಾಡಲು ಹಿಂದೆ ಬಿದ್ದಿಲ್ಲ, ಯಾವತ್ತೂ ರೈತರ ಪರವಾಗಿರುತ್ತೇವೆ. ಕೃಷಿಕರ ಜೊತೆಗೆ ಇರುತ್ತೇವೆ ಎಂಬ ಮಾತು ಕೊಡುತ್ತೇನೆ ಎಂದು ಸಿಎಂ ಹೇಳಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: