SSLC, PUC ಪಾಸಾದವರಿಗೆ ವಾಯುಪಡೆಯಲ್ಲಿ ಜಾಬ್ ಆಫರ್! - Mahanayaka
12:49 AM Monday 16 - September 2024

SSLC, PUC ಪಾಸಾದವರಿಗೆ ವಾಯುಪಡೆಯಲ್ಲಿ ಜಾಬ್ ಆಫರ್!

iaf lower division clerk recruitment
06/08/2024

IAF Lower Division Clerk Recruitment 2024 — ಭಾರತೀಯ ವಾಯುಪಡೆಯಲ್ಲಿ ಲೋವರ್ ಡಿವಿಜನ್ ಕ್ಲರ್ಕ್ ಹುದ್ದೆ ಹಾಗೂ ಹಿಂದಿ ಟೈಪಿಸ್ಟ್ ಹುದ್ದೆಗಳನ್ನು ನೇಮಕಾತಿ ಮಾಡಿಕೊಳ್ಳಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ.

ಭಾರತೀಯ ರಕ್ಷಣಾ ಪಡೆಗಳಲ್ಲಿ ಒಂದಾಗಿರುವಂತಹ ಭಾರತೀಯ ವಾಯುಪಡೆಯಲ್ಲಿ ಉದ್ಯೋಗ ಮಾಡಬಯಸುವವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು, 10ನೇ ತರಗತಿ ಪಾಸಾದವರಿಗೆ ಹಾಗೂ ದ್ವಿತೀಯ ಪಿಯುಸಿ ಪಾಸಾದವರಿಗೆ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಕೇಂದ್ರ ಸರಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವಂತಹ ಅಭ್ಯರ್ಥಿಗಳು ಈ ಒಂದು ಸುವರ್ಣ ಅವಕಾಶವನ್ನು ಸದುಪಯೋಗ ಪಡೆಸಿಕೊಳ್ಳಿ.

ಈ ನೇಮಕಾತಿಗೆ ಸಂಬಂಧಿಸಿದಂತೆ ಭಾರತಿಯ ವಾಯು ಪಡೆಯು ಹುದ್ದೆಗಳಿಗೆ ನಿಗದಿಸಿದ ಅರ್ಹತೆಗಳು, ಅರ್ಜಿ ಸಲ್ಲಿಸುವುದು ಹೇಗೆ ಎಂಬ ಮಾಹಿತಿ ಸೇರಿದಂತೆ ಇತರೆ ನೇಮಕಾತಿಯ ಸಂಪೂರ್ಣ ಮಾಹಿತಿಯನ್ನು ಈ ಲೇಖನದಲ್ಲಿ ತಿಳಿಸಲಾಗಿದ್ದು ಅರ್ಜಿ ಸಲ್ಲಿಸುವಂತವರು ಲೇಖನವನ್ನು ಸಂಪೂರ್ಣ ಓದಿ ನಂತರ ನಿಗದಿಪಡಿಸಿರುವ ಕೊನೆಯ ದಿನಾಂಕದ ಒಳಗಾಗಿಯೇ ಅರ್ಜಿ ಸಲ್ಲಿಸಿ.


Provided by

ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವಂತಹ ಹುದ್ದೆಗಳ ವಿವರ :

ಭಾರತೀಯ ವಾಯುಪಡೆಯಲ್ಲಿ ಒಟ್ಟು ಖಾಲಿ ಇರುವ 182 ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅಧಿಸೂಚನೆ ಹೊರಡಿಸಿದೆ. ಖಾಲಿ ಇರುವ ಹುದ್ದೆಗಳ ವಿವರ ಹಾಗೂ ಹುದ್ದೆಗಳ ಸಂಖ್ಯೆಯು ಕೆಳಗಿನಂತಿದೆ.

* ಲೋವರ್ ಡಿವಿಜನ್ ಕ್ಲರ್ಕ್ — 157 ಹುದ್ದೆಗಳು

* ಹಿಂದಿ ಟೈಪಿಸ್ಟ್ — 18 ಹುದ್ದೆಗಳು

* ನಾಗರಿಕ ಯಂತ್ರ ಮಾರ್ಗದರ್ಶಕ ಚಾಲಕ — 07 ಹುದ್ದೆಗಳು

IAF Lower Division Clerk Recruitment 2024 — ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಶೈಕ್ಷಣಿಕ ಅರ್ಹತೆ : ನೇಮಕಾತಿಯ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ಶಿಕ್ಷಣ ಮಂಡಳಿಯಿಂದ 10ನೇ ತರಗತಿ ಮತ್ತು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.

ವಯೋಮಿತಿ ಮಾನದಂಡ – ಅರ್ಜಿ ಸಲ್ಲಿಸುವವರು ಕನಿಷ್ಠ 18ರಿಂದ 25 ವರ್ಷದ ವಯೋಮಿತಿ ಒಳಗಡೆ ಇರಬೇಕು.

ಮೀಸಲಾತಿ ವರ್ಗದಲ್ಲಿ ಬರುವಂತವರಿಗೆ ಕೆಳಗಿನಂತೆ ಗರಿಷ್ಠ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುವುದು.

 

* ಇತರೆ ಹಿಂದುಳಿದ ವರ್ಗದವರಿಗೆ — 3 ವರ್ಷ

* ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ ವರ್ಗದವರಿಗೆ — 5 ವರ್ಷ

* ಅಂಗವಿಕಲ ಅಭ್ಯರ್ಥಿಗಳಿಗೆ — 10 ವರ್ಷ

ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಕೊಳ್ಳುವ ವಿಧಾನ :

Selection Procedure of IAF Recruitment — ಅರ್ಜಿ ಸಲ್ಲಿಸಿದಂತಹ ಅಭ್ಯರ್ಥಿಗಳಿಗೆ ಮೊದಲನೆಯ ಹಂತದಲ್ಲಿ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಈ ಲಿಖಿತ ಪರೀಕ್ಷೆಯಲ್ಲಿ ಅರ್ಹತೆಗೊಂಡ ಅಭ್ಯರ್ಥಿಗಳಿಗೆ ಕೌಶಲ್ಯ ಪ್ರಾಯೋಗಿಕ ಹಾಗೂ ದೈಹಿಕ ಪರೀಕ್ಷೆಯನ್ನು ನಡೆಸಲಾಗುತ್ತದೆ. ತದನಂತರ ಅಭ್ಯರ್ಥಿಗಳನ್ನು ಸಂದರ್ಶನದ ಮುಖಾಂತರ ಅಂದ್ಯಮವಾಗಿ ಆಯ್ಕೆ ಮಾಡಿಕೊಳ್ಳಲಾಗುವುದು.

ಅರ್ಜಿಯನ್ನು ಹೇಗೆ ಸಲ್ಲಿಸಬೇಕು?

ಈ ನೇಮಕಾತಿಗೆ ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿರುವ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಕೆಳಗಿನ ವಿಳಾಸಕ್ಕೆ ಆಫ್ಲೈನ್ ಮುಖಾಂತರ ಕಳುಹಿಸಬೇಕು.

 ವಿಳಾಸ :

ವೆಸ್ಟರ್ನ್ ಏರ್ ಕಮಾಂಡ್, ಟ್ರೈನಿಂಗ್ ಕಮಾಂಡ್, ಮೆಂಟೆನೆನ್ಸ್ ಕಮಾಂಡ್, ಸೆಂಟ್ರಲ್ ಏರ್ ಕಮಾಂಡ್ ಮತ್ತು ಈಸ್ಟರ್ನ್ ಕಮಾಂಡ್‌ನಲ್ಲಿ

ಅರ್ಜಿ ಸಲ್ಲಿಸಲು ಪ್ರಮುಖ ದಿನಾಂಕಗಳು:

* ಅರ್ಜಿ ಸಲ್ಲಿಕೆ ಆರಂಭ ದಿನಾಂಕ — 03/08/2024

* ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ — 02/09/2024

ಅಧಿಕೃತ ವೆಬ್ ಸೈಟ್ ಲಿಂಕ್ — https://indianairforce.nic.in/


ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.

ಗ್ರೂಪ್ ಗೆ ಜಾಯಿನ್ ಆಗಿ:

https://chat.whatsapp.com/JItjEWZ9e5fBWDL6CkTr97

ಇತ್ತೀಚಿನ ಸುದ್ದಿ