IAS-KAS ಪರೀಕ್ಷೆಗೆ 60 ದಿನಗಳ ಆನ್ ಲೈನ್ ತರಬೇತಿ | ಅರ್ಹರು ಸದುಪಯೋಗ ಪಡಿಸಿಕೊಳ್ಳಿ
04/11/2020
ಶಿವಮೊಗ್ಗ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗ ಮತ್ತು ರಾಜ್ಯ ಲೋಕಸೇವಾ ಆಯೋಗ 2021ರಲ್ಲಿ ನಡೆಸಲಿರುವ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 60 ದಿನಗಳ ಆನ್‍ಲೈನ್ ತರಬೇತಿ ಶಿಬಿರವನ್ನು ಏರ್ಪಡಿಸಲಾಗಿದೆ.
ಆಸಕ್ತರು ದಿನಾಂಕ:13.11.2020ರೊಳಗಾಗಿ ಮೈಸೂರಿನಲ್ಲಿರುವ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ ದ ಕಛೇರಿಯಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯೊಳಗಾಗಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದೆಂದು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವ ಪ್ರೊ. ಲಿಂಗರಾಜ ಗಾಂಧಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ವಿವರಗಳಿಗೆ 0821-2515944 ಈ ದೂರವಾಣಿ ಸಂಖ್ಯೆಯಲ್ಲಿ ಸಂಪರ್ಕಿಸಬಹುದಾಗಿದೆ.