ಭೂ ವಿವಾದ ಪ್ರಕರಣ: ಐಎಎಸ್ ಪ್ರೊಬೇಷನರಿ ಪೂಜಾ ತಾಯಿಗೆ ನ್ಯಾಯಾಂಗ ಬಂಧನ
ಭೂ ವಿವಾದಕ್ಕೆ ಸಂಬಂಧಿಸಿದ ಕ್ರಿಮಿನಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರೊಬೇಷನರಿ ಐಎಎಸ್ ಅಧಿಕಾರಿ ಪೂಜಾ ಖೇಡ್ಕರ್ ಅವರ ತಾಯಿ ಮನೋರಮಾ ಖೇಡ್ಕರ್ ಅವರನ್ನು ಪುಣೆ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಅಲ್ಲದೇ ಕೊಲೆ ಯತ್ನದ ಆರೋಪವನ್ನು ಹೊರಿಸಲಾಗಿದೆ ಎಂಬ ಆಧಾರದ ಮೇಲೆ ಅವರ ಜಾಮೀನು ಅರ್ಜಿಯನ್ನು ನಿರಾಕರಿಸಲಾಗಿದೆ. ಇದು ಸೆಷನ್ಸ್ ನ್ಯಾಯಾಲಯದ ವ್ಯಾಪ್ತಿಯಲ್ಲಿ ಮಾತ್ರ ಇದೆ ಎಂದು ಪ್ರಾಸಿಕ್ಯೂಷನ್ ತಿಳಿಸಿದೆ. ಕಳೆದ ವರ್ಷ ಪುಣೆ ಜಿಲ್ಲೆಯಲ್ಲಿ ಭೂ ವಿವಾದದ ಸಂದರ್ಭದಲ್ಲಿ ವ್ಯಕ್ತಿಗಳಿಗೆ ಬಂದೂಕಿನಿಂದ ಬೆದರಿಕೆ ಹಾಕಿದ ಆರೋಪದ ಮೇಲೆ ಮನೋರಮಾ ಖೇಡ್ಕರ್ ಅವರನ್ನು ಬಂಧಿಸಲಾಗಿತ್ತು.
ಮನೋರಮಾ ಖೇಡ್ಕರ್ ಅವರ ಪೊಲೀಸ್ ಕಸ್ಟಡಿ ಮುಗಿದ ನಂತರ ಪೌಡ್ ಪ್ರದೇಶದ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಪ್ರಥಮ ದರ್ಜೆ (ಜೆಎಂಎಫ್ ಸಿ) ಮುಂದೆ ಹಾಜರಾದರು. ಆಕೆಯ ಪೊಲೀಸ್ ಕಸ್ಟಡಿಯನ್ನು ವಿಸ್ತರಿಸಲು ಪ್ರಾಸಿಕ್ಯೂಷನ್ ವಿನಂತಿಸಲಿಲ್ಲ. ಇದರಿಂದಾಗಿ ಜೆಎಂಎಫ್ ಸಿ ಸುಧೀರ್ ಬಾರ್ಡೆ ಅವರು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು ಎಂದು ಪಬ್ಲಿಕ್ ಪ್ರಾಸಿಕ್ಯೂಟರ್ ಅಮರ್ ನಾನಾವಾರೆ ಹೇಳಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth