ಇಚ್ಲಂಪಾಡಿ: ನೇಣುಬಿಗಿದುಕೊಂಡು ವ್ಯಕ್ತಿ ಸಾವಿಗೆ ಶರಣು
01/09/2023
ನೆಲ್ಯಾಡಿ: ವ್ಯಕ್ತಿಯೋರ್ವರು ತನ್ನ ಮನೆಯಲ್ಲೇ ಫ್ಯಾನ್ ಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ದಾರುಣ ಘಟನೆ ನಡೆದಿದೆ.
ಇಚ್ಲಂಪಾಡಿ ಗ್ರಾಮದ ಅಲೆಕ್ಕಿ ನಿವಾಸಿ ಬಾಲಕೃಷ್ಣಗೌಡ(51) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಪುತ್ತೂರಿನ ಬಾರ್ ವೊಂದರಲ್ಲಿ ಸಪ್ಲೈಯರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.
ಅನಾರೋಗ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ 1 ತಿಂಗಳುಗಳ ಕಾಲ ಅವರು ಕೆಲಸಕ್ಕೆ ಹೋಗದೇ ಮನೆಯಲ್ಲೇ ಇದ್ದರು. ಆಗಸ್ಟ್ 30ರಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಕೊಂಡು ಸಾವಿಗೆ ಶರಣಾಗಿದ್ದಾರೆ.
ನೆಲ್ಯಾಡಿಗೆ ಹೋಗಿದ್ದ ಪತ್ನಿ ಹಾಗೂ ಪುತ್ರ ವಾಪಸ್ ಬಂದ ವೇಳೆ ಬಾಲಕೃಷ್ಣ ಗೌಡ ಅವರು ನೇಣುಬಿಗಿದುಕೊಂಡು ಸಾವಿಗೆ ಶರಣಾಗಿರುವುದು ಬೆಳಕಿಗೆ ಬಂದಿದೆ. ಘಟನಾ ಸ್ಥಳಕ್ಕೆ ನೆಲ್ಯಾಡಿ ಹೊರಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.