ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಬಾಂಬ್ ಸ್ಫೋಟವಾಗುತ್ತಿರಲಿಲ್ಲ: ಗೋವಾ ಮುಖ್ಯಮಂತ್ರಿ
![pramod](https://www.mahanayaka.in/wp-content/uploads/2024/03/pramod.jpg)
ಚಿತ್ರದುರ್ಗ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರೆ ಬಾಂಬ್ ಸ್ಫೋಟವಾಗುತ್ತಿರಲಿಲ್ಲ ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಚಿತ್ರದುರ್ಗಕ್ಕೆ ಆಗಮಿಸಿದ ವೇಳೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲ, ಪೊಲೀಸರಿಗೆ ಫ್ರೀ ಹ್ಯಾಂಡ್ ಇಲ್ಲದ ಕಾರಣ ಆರೋಪಿಯ ಬಂಧನ ವಿಳಂಬವಾಗಿದೆ ಎಂದು ದೂರಿದರು.
ಕಾಂಗ್ರೆಸ್ ಜನರನ್ನು ವಿಭಜನೆ ಮಾಡುತ್ತಿದೆ. ಕಾಂಗ್ರೆಸ್ ಅಂದ್ರೆ ಕರಪ್ಟ್ ಎಂದು ಅವರು ಟೀಕಿಸಿದರು.ರಾಜ್ಯದಲ್ಲಿ ಡಬಲ್ ಇಂಜಿನ್ ಸರ್ಕಾರ ಇದ್ದಾಗ ಅಭಿವೃದ್ಧಿಯಾಗಿದೆ. ಕಾಂಗ್ರೆಸ್ ಬಂದ ನಂತರ ಅಭಿವೃದ್ಧಿಗೆ ಬ್ರೇಕ್ ಬಿದ್ದಿದೆ ಎಂದು ಅವರು ಹೇಳಿದರಲ್ಲದೇ ಮತ್ತೊಮ್ಮೆ ಮೋದಿ ಸರ್ಕಾರ ಆಡಳಿತಕ್ಕೆ ಬರಬೇಕಿದೆ ಎಂದು ಕರೆ ನೀಡಿದರು.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8088059494 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Jpfswu2K6fn62HOHSl5eth