ಅವಳಿ ಸಹೋದರಿಯರ ಅಕ್ರಮ ಬಂಧನದಲ್ಲಿಟ್ಟು ಕಿರುಕುಳ: ವೈದ್ಯ ದಂಪತಿ ಸಹಿತ ಮೂವರು ಅರೆಸ್ಟ್
ಗುವಾಹಟಿ: ಅವಳಿ ಸಹೋದರಿಯರನ್ನು ಮನೆಯಲ್ಲಿ ಬಂಧಿಯಾಗಿಟ್ಟುಕೊಂಡು ದೈಹಿಕ ಕಿರುಕುಳ ನೀಡಿದ ಆರೋಪದ ಮೇಲೆ ವೈದ್ಯ ದಂಪತಿಯನ್ನು ಭಾನುವಾರ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳನ್ನು 5 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ವೈದ್ಯ ದಂಪತಿ ಡಾವಲಿಯುಲ್ ಇಸ್ಲಾಂ ಮತ್ತು ಸಂಗೀತಾ ದತ್ತಾ ಬಂಧಿತ ಆರೋಪಿಗಳಾಗಿದ್ದು, ಅವಳಿ ಸಹೋದರಿಯರನ್ನು ತಮ್ಮ ಮನೆಯಲ್ಲಿ ಬಂಧಿಯಾಗಿಟ್ಟುಕೊಂಡು ಹಲವಾರು ತಿಂಗಳುಗಳಿಂದ ದಂಪತಿ ದೌರ್ಜನ್ಯ ಎಸಗಿದ್ದರು ಎನ್ನಲಾಗಿದೆ.
ಘಟನೆ ಕುರಿತು ಗುವಾಹಟಿ ಪೊಲೀಸ್ ಕಮಿಷನರ್ ದಿಗಂತ ಬರಾಹ್ ಪ್ರತಿಕ್ರಿಯಿಸಿದ್ದು, ವೈದ್ಯ ದಂಪತಿಗಳ ನಿವಾಸವಾದ ರೋಮಾ ಎನ್ಕ್ಲೇವ್ ನ ನಾಲ್ಕನೇ ಮಹಡಿಯಲ್ಲಿ ಅಪ್ರಾಪ್ತ ಬಾಲಕಿಯರನ್ನು ಬಂಧಿಯಾಗಿಡಲಾಗಿತ್ತು. ಅಕ್ರಮ ಬಂಧನದಲ್ಲಿದ್ದ ಓರ್ವ 3 ವರ್ಷದ ಬಾಲಕಿಯ ಖಾಸಗಿ ಭಾಗಗಳಲ್ಲಿ ಗಾಯ ಮತ್ತು ಸುಟ್ಟ ಗಾಯಗಳಾಗಿದ್ದು, ಆಕೆಯ ದೇಹದ ಹಲವು ಭಾಗಗಳಲ್ಲಿ ಗಾಯಗಳಾಗಿವೆ. ವೈದ್ಯಕೀಯ ಪರೀಕ್ಷೆಯಲ್ಲಿ ಆಕೆಯ ಖಾಸಗಿ ಭಾಗಗಳನ್ನು ಸಿಗರೇಟಿನಿಂದ ಸುಟ್ಟಿರುವುದು ಕಂಡುಬಂದಿದೆ.
ಘಟನೆಗೆ ಸಂಬಂಧಿಸಿದಂತೆ ವೈದ್ಯರ ಸಹಾಯಕಿ ಲಕ್ಷ್ಮೀನಾಥ್ ಸೇರಿದಂತೆ, ವೈದ್ಯ ದಂಪತಿಯನ್ನು ಬಂಧಿಸಲಾಗಿದೆ. ಅವರನ್ನು ಭಾನುವಾರ ಗುವಾಹಟಿಯ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ನಂತರ ನ್ಯಾಯಾಲಯವು ದಂಪತಿಯನ್ನು 5 ದಿನಗಳ ಕಾಲ ಹಾಗೂ ಸಹಾಯಕಿಯನ್ನು ಲಕ್ಷ್ಮಿ ನಾಥ್ ಗೆ 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ದಂಪತಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JdaVhZJabeA0V7XQ5ZJp92
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw