ಗಾಂಜಾ ಸಾಗಾಟ – ಮೂಡಿಗೆರೆಯಲ್ಲಿ ಯುವಕ ಬಂಧನ

ಮೂಡಿಗೆರೆ: ಅಬಕಾರಿ ಇಲಾಖೆಯ ಅಧಿಕಾರಿಗಳ ತ್ವರಿತ ಕಾರ್ಯಾಚರಣೆಯಿಂದ ಮೂಡಿಗೆರೆ ಪಟ್ಟಣದ ಬೇಲೂರು ರಸ್ತೆಯ ಬಿಜುವಳ್ಳಿ ಗ್ರಾಮದ ಹಳಸೆ ತಿರುವಿನಲ್ಲಿ ಗಾಂಜಾ ಅಕ್ರಮ ಸಾಗಾಟ ನಡೆಸುತ್ತಿದ್ದವನನ್ನು ಬಂಧಿಸಲಾಗಿದೆ.
ಅಬಕಾರಿ ಉಪ ಆಯುಕ್ತರು, ಚಿಕ್ಕಮಗಳೂರು ಜಿಲ್ಲೆ, ಇವರ ಮಾರ್ಗದರ್ಶನದಲ್ಲಿ ಅಬಕಾರಿ ಉಪ ಅಧೀಕ್ಷಕರು, ಮೂಡಿಗೆರೆ ಅವರ ನೇತೃತ್ವದಲ್ಲಿ ಈ ದಾಳಿ ನಡೆಸಲಾಯಿತು. ವಜೀರ್ ಅಹ್ಮದ್ ಅಲಿಯಾಸ್ ಶೇಕ್ ಅಬ್ದುಲ್ಲ ಬಿನ್ ಲೇಟ್ ಅಲಿಜಾನ್ (27), ಜೆಎಂ ರಸ್ತೆ, ಮೂಡಿಗೆರೆ ಎಂಬುವವನು ತನ್ನ ವ್ಯಾಗನಾರ್ ಕಾರು (ನಂ. ಕೆಎ 19 ಎನ್ 5049) ನಲ್ಲಿ 1.975 ಕೆ.ಜಿ. ಗಾಂಜಾ ಸಾಗಾಟ ಮಾಡುತ್ತಿದ್ದಾನೆ ಎಂಬ ಮಾಹಿತಿ ದೊರಕಿದ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿ, ಆರೋಪಿಯನ್ನು ಬಂಧಿಸಲಾಗಿದೆ.
ಆರೋಪಿಯನ್ನು ಎನ್‌ಡಿಪಿಎಸ್ (NDPS) ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿ, ಚಿಕ್ಕಮಗಳೂರು ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಈ ಕಾರ್ಯಾಚರಣೆಯಲ್ಲಿ ಅಬಕಾರಿ ಉಪ ಅಧೀಕ್ಷಕರಾದ ಶೇಖರ್ ಎಂ.ಆರ್, ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ., ಸಿಬ್ಬಂದಿಗಳಾದ ರಮೇಶ್ ತುಳಜಣ್ಣನವರ್, ಶಂಕರ ಗುರವ ಹಾಗೂ ವಾಹನ ಚಾಲಕರಾದ ಪ್ರವೀಣ್ ಅವರು ಭಾಗವಹಿಸಿದ್ದರು. ಪ್ರಕರಣವನ್ನು ಅಬಕಾರಿ ನಿರೀಕ್ಷಕರಾದ ಲೋಕೇಶ್ ಸಿ., ಮೂಡಿಗೆರೆ ಉಪ ವಿಭಾಗ ಇವರು ದಾಖಲಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: