ಮಹಿಳೆಯ ಮನೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿ ಬಿದ್ದ ಬಿಜೆಪಿ ಕಾರ್ಯಕರ್ತ: ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ!
ಕೊಡಗು: ವಿವಾಹಿತ ಮಹಿಳೆಯ ಜೊತೆಗೆ ಅಕ್ರಮ ಸಂಬಂಧ ಹೊಂದಿದ ಆರೋಪದಲ್ಲಿ ಗುತ್ತಿಗೆದಾರ, ಬಿಜೆಪಿ ಕಾರ್ಯಕರ್ತನಿಗೆ ಮಹಿಳೆಯ ಸಂಬಂಧಿಕರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಕೊಡಗು ಜಿಲ್ಲೆಯ ಕುಶಾಲನಗರದಲ್ಲಿ ನಡೆದಿದೆ.
ಸಿಎಂ ಸಿದ್ದರಾಮಯ್ಯನವರ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣದ ಆರೋಪಿಗಳಲ್ಲಿ ಓರ್ವನಾಗಿರುವ ಸಂಪತ್ ಎಂಬಾತ ಮಹಿಳೆಯೊಬ್ಬರ ಮನೆಯಲ್ಲಿ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದು, ಮಹಿಳೆಯರ ಸಂಬಂಧಿಕರಿಂದ ಧರ್ಮದೇಟು ತಿಂದಿದ್ದಾನೆ.
ಘಟನೆಗೆ ಸಂಬಂಧಿಸಿದಂತೆ ಸಂಪತ್ ವಿರುದ್ಧ ಕುಶಾಲನಗರ ಪಟ್ಟಣ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ ಎಂದು ವರದಿಯಾಗಿದೆ. ಇನ್ನೂ ಸಂಪತ್ ಬಿಜೆಪಿ ಸಕ್ರಿಯ ಸದಸ್ಯನಾಗಿದ್ದಾನೆ. ಮಾಜಿ ಶಾಸಕ ಅಪ್ಪಚ್ಚು ರಂಜನ್ ಪರವಾಗಿ ಈ ಚುನಾವಣೆಯಲ್ಲಿ ಓಡಾಡಿದ್ದ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಯೂಟ್ಯೂಬ್ ಚಾನೆಲ್ ಸಬ್ಸ್’ಕ್ರೈಬ್ ಮಾಡಿ: https://www.youtube.com/channel/UCTTKjhIcEgYKLMGVKaXU3-w
ಗೂಗಲ್ ನ್ಯೂಸ್ ನಲ್ಲಿ ಫಾಲೋ ಮಾಡಿ: https://news.google.com/publications/CAAqBwgKMICOwgswoqnZAw