ಜಮ್ಮು-ಕಾಶ್ಮೀರದಲ್ಲಿ ಏನೂ ಬದಲಾವಣೆ ಆಗಿಲ್ಲ: ಪಿಡಿಪಿ ನಾಯಕಿ ಇಲ್ತಿಜಾ ಮುಫ್ತಿ ಆರೋಪ

ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (ಪಿಡಿಪಿ) ನಾಯಕಿ ಇಲ್ತಿಜಾ ಮುಫ್ತಿ ಅವರು ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ಗೆ ಭೇಟಿ ನೀಡಲು ತೆರಳುತ್ತಿದ್ದಾಗ ತಮ್ಮನ್ನು ಮತ್ತು ಅವರ ತಾಯಿ ಮೆಹಬೂಬಾ ಮುಫ್ತಿ ಅವರನ್ನು ಗೃಹಬಂಧನದಲ್ಲಿರಿಸಲಾಗಿದೆ ಎಂದು ಆರೋಪಿಸಿದ್ದಾರೆ.
ವರದಿಗಳ ಪ್ರಕಾರ, ಬುಧವಾರ ರಾತ್ರಿ ಬಾರಾಮುಲ್ಲಾ ಜಿಲ್ಲೆಯ ಚೆಕ್ ಪಾಯಿಂಟ್ ನಲ್ಲಿ ನಿಲ್ಲಿಸಲು ನಿರಾಕರಿಸಿದ ನಂತರ ವಸೀಮ್ ಮಜೀದ್ ಮಿರ್ ಸೇನಾ ಗುಂಡಿನ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ.
ಈ ಕುರಿತು ಶನಿವಾರ ಟ್ವೀಟ್ ಮಾಡಿರುವ ಇಲ್ತಿಜಾ ಮುಫ್ತಿ, “ನನ್ನ ತಾಯಿ ಮತ್ತು ನನ್ನನ್ನು ಗೃಹಬಂಧನದಲ್ಲಿರಿಸಲಾಗಿದೆ. ವಸೀಮ್ ಮಿರ್ ಅವರನ್ನು ಸೇನೆಯು ಗುಂಡಿಕ್ಕಿ ಕೊಂದ ಸೊಪೋರ್ ಗೆ ಭೇಟಿ ನೀಡಲು ಅವರು ಉದ್ದೇಶಿಸಿದ್ದರಿಂದ ನಮ್ಮ ಗೇಟ್ ಗಳನ್ನು ಲಾಕ್ ಮಾಡಲಾಗಿದೆ” ಎಂದು ಆರೋಪಿಸಿದ್ದಾರೆ.
ಮಖನ್ ದಿನ್ ಅವರ ಕುಟುಂಬವನ್ನು ಭೇಟಿ ಮಾಡಲು ನಾನು ಇಂದು ಕಥುವಾಗೆ ಭೇಟಿ ನೀಡಲು ಉದ್ದೇಶಿಸಿದ್ದೆ ಮತ್ತು ನನಗೆ ಹೊರಗೆ ಹೋಗಲು ಸಹ ಅವಕಾಶ ನೀಡುತ್ತಿಲ್ಲ. ಚುನಾವಣೆಯ ನಂತರವೂ ಕಾಶ್ಮೀರದಲ್ಲಿ ಏನೂ ಬದಲಾಗಿಲ್ಲ. ಈಗ ಸಂತ್ರಸ್ತರ ಕುಟುಂಬಗಳನ್ನು ಸಂತೈಸುವುದು ಸಹ ಅಪರಾಧೀಕರಣಗೊಳ್ಳುತ್ತಿದೆ” ಎಂದು ಅವರು ಆರೋಪಿಸಿದ್ದಾರೆ.
ಜಾಗತಿಕ ಕನ್ನಡಿಗರ ಅಚ್ಚುಮೆಚ್ಚಿನ ಸುದ್ದಿತಾಣ ಮಹಾನಾಯಕ ಸುದ್ದಿಗಳನ್ನು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ ಕಳುಹಿಸಬೇಕೇ? ಹಾಗಿದ್ದರೆ, ನಿಮ್ಮ ವಾಟ್ಸಾಪ್ ಗ್ರೂಪ್ ಗೆ 9686399493 ನಂಬರ್ ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ:
https://chat.whatsapp.com/BHOOdLNNvmD17cBJslQgwj